More

    ಪ್ರಜಾಪ್ರಭುತ್ವದಲ್ಲಿ ಕಾರ್ಯಾಂಗದ ಪಾತ್ರ ಪ್ರಮುಖ; ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿಕೆ


    ನೌಕರರ ಸಂಘದಿಂದ ಪ್ರಶಸ್ತಿ ಪ್ರದಾನ ಸಮಾರಂಭ


    ರಾಯಚೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ ಹಾಗೂ ನ್ಯಾಯಾಂಗದ ಪಾತ್ರಕ್ಕಿಂತ ಕಾರ್ಯಾಂಗದ ಪಾತ್ರ ಮಹತ್ವದ್ದಾಗಿದ್ದು, ಕಾರ್ಯಾಂಗ ವ್ಯವಸ್ಥೆಯಲ್ಲಿರುವ ಎಲ್ಲ ಸರ್ಕಾರಿ ನೌಕರರು ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.

    ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಮಂಗಳವಾರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಉತ್ತಮ ನೌಕರ ಹಾಗೂ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

    ದೇಶಕ್ಕೆ ಸ್ವಾತಂತ್ರೃ ದೊರೆತ ಒಂದು ವರ್ಷಗಳ ನಂತರ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರೃ ದೊರೆತಿದ್ದು, ಈ ಭಾಗದ ರಾಯಚೂರು ಜಿಲ್ಲೆಯನ್ನು ಅತಿ ಹಿಂದುಳಿದ ಜಿಲ್ಲೆ ಹಾಗೂ ಮಹತ್ವಾಕಾಂಕ್ಷೆಯ ಜಿಲ್ಲೆ ಎಂದು ಘೋಷಣೆ ಮಾಡಲಾಗಿದೆ. ಸರ್ಕಾರಿ ನೌಕರರು ಒಗ್ಗೂಡಿ ಕೆಲಸ ಮಾಡಿದಾಗ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದರು.

    ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಮಾತನಾಡಿ, ಸರ್ಕಾರಿ ನೌಕರರು ಈಗಾಗಲೇ ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ಸೇವಾ ಭದ್ರತೆಯನ್ನು ಕಳೆದುಕೊಂಡಿದ್ದಾರೆ. ಹಳೇ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು. ಇದರಿಂದ ನಿವೃತ್ತ ನೌಕರರಿಗೆ ಅನುಕೂಲವಾಗುತ್ತದೆ ಎಂದರು.

    ಕೇಂದ್ರದಲ್ಲಿರುವ ವೇತನದಂತೆ ರಾಜ್ಯದ ಸರ್ಕಾರಿ ನೌಕರರಿಗೂ ನೀಡಿದ್ದಲ್ಲಿ ರಾಜ್ಯದ ಎಲ್ಲ ಸರ್ಕಾರಿ ನೌಕರರು ನೆಮ್ಮದಿಯ ಜೀವನ ನಡೆಸಬಹುದಾಗಿದೆ. ಕೇಂದ್ರ ಮಾದರಿಯಲ್ಲಿ ವೇತನ ನೀಡಿದರೆ ಹಳೆಯ ಪಿಂಚಣಿ ವ್ಯವಸ್ಥೆಯನ್ನೂ ಜಾರಿಗೆ ತರುವ ಅವಶ್ಯಕತೆಯಿಲ್ಲ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts