More

    ಎಂಎಸ್‌ಪಿ ಶಾಸನಬದ್ಧವಾಗಿ ಜಾರಿಯಾಗಲಿ


    ರಾಯಚೂರು: ಸ್ವಾಮಿನಾಥನ್ ಆಯೋಗದ ಶಿಾರಸಿನಂತೆ ಕೃಷಿ ವೆಚ್ಚಕ್ಕೆ ಶೇ.50 ಹಣ ಸೇರಿಸಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಶಾಸನಬದ್ಧ ಜಾರಿ ಸೇರಿ, ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಿಐಟಿಯು, ಕೆಪಿಆರ್‌ಎಸ್, ಎಐಎಡಬ್ಲುೃಯು, ಜಂಟಿ ಕ್ರಿಯಾ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ, ಡಿಸಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಲಾಯಿತು.

    ಕಾರ್ಮಿಕ ವಿರೋಧಿ ಸಂಹಿತೆ ರದ್ದುಗೊಳಿಸಬೇಕು. ಬಲವಂತದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ನೀಡುತ್ತಿರುವ ಕೂಲಿ ಮೊತ್ತವನ್ನು 600 ರೂ.ಗೆ ಹೆಚ್ಚಿಸಬೇಕು. ಬಗರ್‌ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೊಳಿಸಬೇಕು. ಖಾಸಗೀಕರಣ ಹಾಗೂ ಸಾರ್ವಜನಿಕ ವಲಯದ ಬಂಡವಾಳ ವಾಪಾಸತಿ ನಿಲ್ಲಿಸಬೇಕು.

    ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಖಾದ್ಯ ತೈಲ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು. ಆಹಾರ ಪದಾರ್ಥಗಳ ಮೇಲಿನ ಜಿಎಸ್‌ಟಿಯನ್ನು ಹಿಂಪಡೆಯಬೇಕು. ಎಲ್ಲ ಕಾರ್ಮಿಕರ ವೇತನವನ್ನು 25 ಸಾವಿರ ರೂ.ಗೆ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts