ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಷಡ್ಯಂತ್ರ: ಕೆ.ಶಾಂತಪ್ಪ

blank

ರಾಯಚೂರು: ಮುಡಾ ಹಗರದ ವಿಚಾರವನ್ನಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯುವ ಕಾರ್ಯಕ್ಕೆ ಬಿಜೆಪಿ ಮೈತ್ರಿ ಪಕ್ಷಗಳು ಮುಂದಾಗಿವೆ ಎಂದು ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿ, ಸಿಎಂ ಸಿದ್ದರಾಮಯ್ಯ ಜನಬೆಂಬಲ ಹಾಗೂ ಏಳ್ಗೆಯನ್ನು ಸಹಿಸದ ರಾಜಕೀಯ ಪಕ್ಷಗಳಿಂದ ಅವರ ವಿರುದ್ಧ ಷಡ್ಯಂತ್ರ ರೂಪಿಸಿ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿಸಲಾಗಿದೆ. ಇದನ್ನು ವಿರೋಧಿಸಿ ಆ.27ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಸಮುದಾಯದವರು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಇದನ್ನೂ‌ಓದಿ: ಸಮಾಜಹಿತಕ್ಕಿಂತ ಸ್ವಾರ್ಥಹಿತ ಹೆಚ್ಚಳ: ಪ್ರೊ.ಎಸ್.ಜಿ ಸಿದ್ದರಾಮಯ್ಯ ಅಭಿಪ್ರಾಯ

ಮುಡಾ ವಿಚಾರವಾಗಿ ಬಿಜೆಪಿ ಮೈತ್ರಿ ಪಕ್ಷಗಳು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ ಹೋರಾಟ ನಡೆಸುತ್ತಿದ್ದು, ಎಲ್ಲ ಸಮುದಾಯಗಳ ಅಭಿವೃದ್ಧಿಗಾಗಿ ಜನಪರವಾದ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವುದು ಸಿದ್ದರಾಮಯ್ಯ ವಿರುದ್ಧ ಕುತಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಸಿದ್ದರಾಮೋತ್ಸವ ಸಂದರ್ಭದಲ್ಲಿ 20 ಲಕ್ಷಕ್ಕೂ ಹೆಚ್ಚಿನ ಜನರು ಸೇರಿದ್ದರ ಹಿನ್ನೆಲೆಯಲ್ಲಿ ಹಾಗೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಡೆಸುತ್ತಿರುವ ಕಾಂಗ್ರೆಸ್ ಆಡಳಿತವನ್ನು ಕಂಡು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇನ್ನಿತರ ನಾಯಕರುಗಳಿಗೆ ನಡುಕ ಉಂಟಾಗಿದೆ ಎಂದರು.

ಇದನ್ನೂ ಓದಿ: ಪ್ರಾಸಿಕ್ಯೂಷನ್ ಅನುಮತಿ ನಿಯಮ ಬಾಹೀರ: ಆಂಜಿನೇಯ್ಯ

ಖಾಸಗಿ ವ್ಯಕ್ತಿಯಿಂದ ಸಲ್ಲಿಸಲಾದ ದೂರನ್ನು ಪರಿಗಣಿಸಿ ಯಾವುದೇ ಪರಿಶೀಲನೆ ಮಾಡದೇ ಕೆಲವೇ ಗಂಟೆಗಳಲ್ಲಿ ಪ್ರಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸಿದ್ದರಾಮಯ್ಯ ಅವರ ವಿರುದ್ಧ ವೈಯಕ್ತಿಕ ಸಂಚು ರೂಪಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿ.ಲಕ್ಷ್ಮೀರೆಡ್ಡಿ, ಜಂಬಣ್ಣ, ಜಿ.ಸುರೇಶ್, ಪಾಗುಂಟಪ್ಪ, ಪಂಪಾಪತಿ, ಸುರೇಖಾ, ಪಾಂಡುರಂಗ, ಸುರೇಂದ್ರಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…