ರಾಯಚೂರು: ನಗರದಲ್ಲಿ ಕಳೆದ ಕೆಲ ದಿನಗಳಿಂದ ಹೊಂಡು ಮಿಶ್ರಿತ ನೀರು ಪೂರೈಕೆಯಾಗುತ್ತಿದ್ದು, ಶುದ್ಧ ನೀರು ಪೂರೈಕೆ ಮಾಡುವಲ್ಲಿ ಜಿಲ್ಲಾಡಳಿತ ಹಾಗೂ ನಗರಸಭೆ ಸಂಪೂರ್ಣವಿಲವಾಗಿದೆ ಎಂದು ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ನರಸಿಂಹಲು ಮೈತ್ರಿಕರ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಕಳೆದ 15ದಿನಗಳಿಂದ ನಗರದಲ್ಲಿ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ ಜತೆಗೆ ನೀರು ಹೊಂಡಿನಿಂದ ಕೂಡಿದ್ದು ಜನರಿಗೆ ಇದರಿಂದ ತೊಂದರೆ ಉಂಟಾಗುತ್ತಿದೆ. ಕೂಡಲೇ ನಗರದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಜಿಲ್ಲಾಡಳಿತ ಮತ್ತು ನಗರಸಭೆ ಅಧಿಕಾರಿಗಳು ಮುಂದಾಗಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ: ಕುಲುಷಿತ ಕುಡಿಯುವ ನೀರು ಪೂರೈಕೆ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ನಗರಸಭೆಯಿಂದ ಮನೆ ಮನೆಯಿಂದ ಕಸ ಸಂಗ್ರಹಿಸುವ ವಾಹನಗಳಲ್ಲಿ ಹಿಂದಿ ಭಾಷೆಯ ಹಾಡುಗಳನ್ನು ಹಾಕುತ್ತಿದ್ದು, ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಕನ್ನಡ ಜಾಗೃತಿ ಹಾಡುಗಳನ್ನು ಹಾಕುವಂತೆ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ತಮೇಶ್, ಉರುಕುಂದಿ, ತಾಯಪ್ಪ, ನರಸಿಂಹಲು ಸೇರಿದಂತೆ ಇತರರಿದ್ದರು.