More

    ಎಂ.ಈರಣ್ಣ ವೃತ್ತದಲ್ಲಿ ತರಕಾರಿ ಮಾರಾಟ; ರಾಯಚೂರು ನಗರಸಭೆ ಸಾಮಾನ್ಯಸಭೆಯಲ್ಲಿ ಒಪ್ಪಿಗೆ

    ರಾಯಚೂರು: ಹಲವು ವರ್ಷಗಳಿಂದ ನಗರದ ಎಂ.ಈರಣ್ಣ ವೃತ್ತದಲ್ಲಿ ತರಕಾರಿ ಮಾರಾಟ ಮಾಡುವ ಕುರಿತು ನಗರಸಭೆ ಸಾಮಾನ್ಯಸಭೆಯಲ್ಲಿ ಚರ್ಚಿಸಿ, ಈರಣ್ಣ ವೃತ್ತ ಸೇರಿ ಇನ್ನಿತರ ನಾಲ್ಕು ಕಡೆ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲು ಸರ್ವಸದಸ್ಯರು ಒಮ್ಮತದಿಂದ ಸಮ್ಮತಿಸಿದರು.

    ಶನಿವಾರ ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯಸಭೆಯಲ್ಲಿ ನಗರದ ಎಂ.ಈರಣ್ಣ ವೃತ್ತ ಹಾಗೂ ವಿವಿಧ ಬಡಾವಣೆಗಳಲ್ಲಿ ತರಕಾರಿ ಮಾರಾಟ ಮಡುತ್ತಿರುವ ವ್ಯಾಪಾರಸ್ಥರಿಗೆ ಮುಂಜಾನೆ 4 ಗಂಟೆಯಿಂದ ಬೆಳಗ್ಗೆ 9 ಗಂಟೆವರೆಗೆ ತರಕಾರಿ ಮಾರಾಟಕ್ಕೆ ಅವಕಾಶ ನೀಡಲು ನಿರ್ಣಯ ಕೈಗೊಳ್ಳಲಾಯಿತು.

    ನಗರಸಭೆ ಬೊಕ್ಕಸಕ್ಕೆ ತೊಂದರೆ ಉಂಟಾಗದಂತೆ ವ್ಯಾಪಾರಸ್ಥರಿಂದ ಕರವಸೂಲಿ ಮಾಡಿ ಬೆಳಗ್ಗೆ 4ರಿಂದ 9ರವರಗೆ ತರಕಾರಿ ಮಾರಾಟ ಮಾಡಲು ಅನುಮತಿ ನೀಡಲಾಗುವುದು. ನಗರವು ಹೆಚ್ಚು ಬೆಳದಿದ್ದು, ಬಡಾವಣೆಯ ನಿವಾಸಿಗಳು ಮುಖ್ಯ ಮಾರುಕಟ್ಟೆಗೆ ಬರಲು ಸಾಧ್ಯವಾಗದಿರುವುದರಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಪೌರಾಯುಕ್ತ ಗುರುಲಿಂಗಪ್ಪ ಹೇಳಿದರು. ಇದಕ್ಕೆ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದರು.

    ಇದಕ್ಕೂ ಮೊದಲು ನಗರಸಭೆ ಸದಸ್ಯ ಶ್ರೀನಿವಾಸರೆಡ್ಡಿ ಮಾತನಾಡಿ, ನಗರದಲ್ಲಿ ವಿದ್ಯುತ್ ದೀಪ ಅಳವಡಿಸಲು ಅಗತ್ಯ ಸಿಬ್ಬಂದಿಗಳಲ್ಲಿ. ಅಲ್ಲದೆ ಇರುವ ಸಿಬ್ಬಂದಿಗೂ ಸಮರ್ಪಕವಾಗಿ ವೇತನ ನೀಡುತ್ತಿಲ್ಲ. ಆದರೂ ಸರಿಯಾಗಿ ವೇತನ ನೀಡಲಾಗುತ್ತಿದೆ ಎಂದು ದಾಖಲೆಗಳಲ್ಲಿ ತೋರಿಸುವ ಕೆಲಸವಾಗುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ತನಿಖೆಯಾಗಬೇಕೆಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts