More

    ಮುನ್ನೂರುಕಾಪು ಸಮುದಾಯದಿಂದ ಸಾಂಸ್ಕೃತಿಕ ಸ್ಪರ್ಧೆ

    ರಾಯಚೂರು: ನವರಾತ್ರಿ ಅಂಗವಾಗಿ ಮುನ್ನೂರು ಕಾಪು ಸಮುದಾಯದಿಂದ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ನೃತ್ಯ ಮತ್ತು ಗೀತ ಗಾಯನ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ ಎಂದು ಮಾಜಿ ಶಾಸಕ ಎ.ಪಾಪಾರೆಡ್ಡಿ ತಿಳಿಸಿದರು.

    ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು. ಸಮುದಾಯದಿಂದ ನವರಾತ್ರಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಸೆ.26 ರಿಂದ ಅ.4ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದರು.

    ಬೆಂಗಳೂರು, ತುಮಕೂರು, ಕಲಬುರಗಿಯ ವಿವಿಧ ಕಲಾ ತಂಡಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಜಾನಪದ ನೃತ್ಯ, ಭರತ ನಾಟ್ಯ, ನವದುರ್ಗೆ ನೃತ್ಯ ಹಾಗೂ ಸಮೂಹ ಗೀತ ಗಾಯನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಕಾಲೇಜು ವಿಭಾಗದಲ್ಲಿ ಪ್ರಥಮ ಬಹುಮಾನ 30 ಸಾವಿರ ರೂ., ದ್ವಿತೀಯ ಬಹುಮಾನ 20 ಸಾವಿರ ರೂ., ತೃತೀಯ ಬಹುಮಾನ 15 ಸಾವಿರ ರೂ. ಮತ್ತು ಪ್ರಶಸ್ತಿಪತ್ರ ನೀಡಲಾಗುವುದು. ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಬಹುಮಾನ 25 ಸಾವಿರ ರೂ. ದ್ವಿತೀಯ ಬಹುಮಾನ 15 ಸಾವಿರ ರೂ., ತೃತೀಯ ಬಹುಮಾನ 10 ಸಾವಿರ ರೂ. ನೀಡಲಾಗುವುದು.

    ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲ ತಂಡಗಳಿಗೂ ನೆನಪಿನ ಕಾಣಿಕೆ, ಪ್ರಮಾಣಪತ್ರ ನೀಡಲಾಗುವುದು. ಆಸಕ್ತರು ಕಲಾವಿದ ಡಾ.ಶರಣಪ್ಪ ಗೋನಾಳ (ಮೊ:94489102530) ಸಂಪರ್ಕಿಸಿ ಹೆಸರು ನೋಂದಾಯಿಸಬೇಕು ಎಂದು ಎ.ಪಾಪಾರೆಡ್ಡಿ ತಿಳಿಸಿದರು. ಮುನ್ನೂರು ಕಾಪು ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ಶ್ರೀನಿವಾಸರೆಡ್ಡಿ, ಬಂಗಿ ನರಸರೆಡ್ಡಿ, ಜಿ.ಶೇಖರರೆಡ್ಡಿ ಇದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts