ಮುಸ್ಲಿಮರ ಮೀಸಲಾತಿ ರದ್ಧತಿ ಖಂಡನೀಯ

ರಾಯಚೂರು: ಮುಸ್ಲಿಮರಿಗೆ ನೀಡಲಾಗುತ್ತಿದ್ದ ಶೇ.4 ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿರುವುದು ತೀವ್ರ ಖಂಡನೀಯವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರ ಬಡ ಮುಸ್ಲಿಮರ ಭವಿಷ್ಯ ಮಂಕಾಗುವಂತೆ ಮಾಡಿದೆ ಎಂದು ಅಂಜುಮನ್ ಎ ಸಂಸ್ಥೆ ಸಂಚಾಲಕ ಡಾ.ರಜಾಕ್ ಉಸ್ತಾದ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅತ್ಯಂತ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಇತರ ಸಮುದಾಯಗಳಿಗೆ ಮೀಸಲಾತಿ ನೀಡಲು ನಮ್ಮ ವಿರೋಧವಿಲ್ಲ. ಆದರೆ ಮುಸ್ಲಿಮರ ಮೀಸಲು ಕಸಿದುಕೊಂಡು ಮತ್ತೊಂದು ಸಮುದಾಯಕ್ಕೆ ನೀಡುವುದು ಸರಿಯಲ್ಲ ಎಂದರು.

ನ್ಯಾಯಮೂರ್ತಿ ರಾಜೇಂದ್ರ ಸಾಚಾರ್, ನ್ಯಾಯಮೂರ್ತಿ ರಂಗನಾಥ ಮಿಶ್ರಾ ಆಯೋಗದ ವರದಿಗಳು ಮುಸ್ಲಿಂ ಸಮುದಾಯ ಆರ್ಥಿಕ ಹಿಂದುಳಿದಿರುವಿಕೆ ಆಧಾರದ ಮೇಲೆ ಮೀಸಲಾತಿ ನಿಗದಿಪಡಿಸಿವೆ. 1999 ರಲ್ಲಿ ರಾಜ್ಯಸಭಾ ಸದಸ್ಯರಾಗಿದ್ದ ಕೆ.ರಹೆಮಾನ್ ಖಾನ್ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ರಚಿಸಿ ನೀಡಿದ್ದ ವರದಿ ಆಧಾರದ ಮೇಲೆ ಎಚ್.ಡಿ.ದೇವೆಗೌಡರು ಪ್ರಧಾನಿಯಾಗಿದ್ದಾಗ ಶೇ.4 ಮೀಸಲಾತಿ ಜಾರಿಗೊಳಿಸಲಾಗಿತ್ತು.

ಸಂವಿಧಾನದ 64 ಮತ್ತು 63 ರ ಅನ್ವಯ ಕೊಡಮಾಡಿರುವ ಮೀಸಲಾತಿಯನ್ನು ಧಾರ್ಮಿಕ ಅಲ್ಪಸಂಖ್ಯಾತರಿಗೆ ನೀಡಲು ಬರುವುದಿಲ್ಲ ಎಂಬ ಕಾರಣ ನೀಡಿ ರದ್ದುಗೊಳಿಸಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ. ಬಿಜೆಪಿಗೆ ಮುಸ್ಲಿಮರು ಮತ ಹಾಕುವುದಿಲ್ಲ ಎಂಬ ಭಾವನೆಯಿಂದ ಇಂತಹ ನಿರ್ಧಾರ ಸರ್ಕಾರ ಕೈಗೊಂಡಿದೆ.

ಆರ್ಥಿಕವಾಗಿ ಹಿಂದುಳಿದವರಿಗೆ ಜಾರಿಗೊಳಿಸಲಾಗಿರುವ ಶೇ.10 ಮೀಸಲಾತಿಗೆ ಸೇರ್ಪಡೆ ಮಾಡಿದಲ್ಲಿ ಸಮುದಾಯಕ್ಕೆ ಘೋರ ಅನ್ಯಾಯವಾಗುತ್ತದೆ. ಕೂಡಲೇ ಮುಸ್ಲಿಮರ ಮೀಸಲಾತಿ ರದ್ದುಗೊಳಿಸುವ ತೀರ್ಮಾನವನ್ನು ಕೈಬಿಡಬೇಕು ಎಂದು ಡಾ.ರಜಾಕ್ ಉಸ್ತಾದ್ ಒತ್ತಾಯಿಸಿದರು. ಪದಾಧಿಕಾರಿಗಳಾದ ಅಬ್ದುಲ್ ಹೈ ಫಿರೋಜ್, ಫರೀದ್ ಮಹ್ಮದ್ ಗೋಗಿ, ಸೈಯದ್ ಅಮೀನುಲ್ ಹಕ್, ಮಹ್ಮದ್ ರಫಿ ಇದ್ದರು.

Share This Article

ನೈಲ್ ಪಾಲಿಶ್ ಬಳಸಿದ್ರೆ ಬರುತ್ತೆ ಕ್ಯಾನ್ಸರ್! ಯುವತಿಯರೇ ಎಚ್ಚರ

 ಬೆಂಗಳೂರು:  ಮಹಿಳೆಯರು ತಮ್ಮ ಕೈ ಮತ್ತು ಪಾದದ ಉಗುರುಗಳಿಗೆ ನೈಲ್ ಪಾಲಿಶ್ ಹಚ್ಚಲು ಇಷ್ಟಪಡುತ್ತಾರೆ.  ವಿಶೇಷ…

ಎಚ್ಚರ, ದೇಹ ದಣಿದಿದ್ರೂ ನಿದ್ದೆ ಬರ್ತಿಲ್ಲವೇ? ಸಿರ್ಕಾಡಿಯನ್ ಸಿಂಡ್ರೋಮ್​ ಇರಬಹುದು!!

ಬೆಂಗಳೂರು: ದೇಹ ದಣಿದಿರುತ್ತದೆ. ಆದರೆ ನಿದ್ರೆ ಬರುತ್ತಿಲ್ಲ. ಇದಕ್ಕೆ ದೇಹದ ಸಿರ್ಕಾಡಿಯನ್ ಲಯ ತಪ್ಪಿರುವುದು, ಅತಿಯಾದ…

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…