More

    ಮುಸ್ಲಿಮರು ಮುಖ್ಯವಾಹಿನಿಗೆ ಬರದಂತೆ ಷಡ್ಯಂತ್ರ

    ರಾಯಚೂರು: ಪ್ರವರ್ಗ 2 ಬಿ ಅಡಿ ಮುಸ್ಲಿಮರಿಗೆ ನೀಡಲಾಗಿದ್ದ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಸ್‌ಡಿಪಿಐನಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಲಾಯಿತು.
    ಮುಸ್ಲಿಮರ ಮೀಸಲಾತಿ ರದ್ದುಪಡಿಸಿರುವುದು ಅಸಂವಿಧಾನಿಕವಾಗಿದ್ದು, ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ ಎಂದು ದೂರಿದರು. ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿ ಇಲ್ಲದಿರುವುದರಿಂದ ರಾಜ್ಯದಲ್ಲಿ ಮುಸ್ಲಿಂ ಸಮುದಾಯ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗವೆಂದು ವೈಜ್ಞಾನಿಕ ಅಧ್ಯಯನದ ಮೂಲಕ 2ಬಿ ಮೀಸಲಾತಿ ನೀಡಲಾಗಿತ್ತು.

    ಸ್ವಾತಂತ್ರೃ ನಂತರ ನಾಗನಗೌಡ ಸಮಿತಿ, ವೆಂಕಟಸ್ವಾಮಿ ಆಯೋಗ ಮತ್ತು ಚಿನ್ನಪ್ಪ ರೆಡ್ಡಿ ಆಯೋಗ ಮುಸ್ಲಿಮರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಿದೆ. ಆದರೆ, ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡ್ಡುವ ಹಾಗೂ ಮುಖ್ಯವಾಹಿನಿಗೆ ಬರದಂತೆ ನೋಡಿ ಕೊಳ್ಳುವ ಷಡ್ಯಂತ್ರವನ್ನು ರಾಜ್ಯ ಸರ್ಕಾರ ನಡೆಸುತ್ತಿದೆ.
    2ಬಿ ಮೀಸಲಾತಿ ರದ್ದುಪಡಿಸಿರುವುದು ಸಂವಿಧಾನದ ಆಶಯಕ್ಕೆ ಧಕ್ಕೆಯಾಗಿದೆ. ಸರ್ಕಾರ ಗುಪ್ತ ಅಜೆಂಡಾವನ್ನು ಜಾರಿಗೊಳಿಸಿದ್ದು ಸರಿಯಲ್ಲ. ಮುಸ್ಲಿಂ ಸಮುದಾಯಕ್ಕೆ ನಿಗದಿಯಾಗಿದ್ದ 2ಬಿ ಮೀಸಲಾತಿಯನ್ನು ಮರು ಸ್ಥಾಪಿಸಬೇಕು ಎಂದು ಒತ್ತಾಯಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts