More

    ಜನರ ಹಿತ ಕಾಪಾಡುವಲ್ಲಿ ರಾಷ್ಟ್ರೀಯ ಪಕ್ಷಗಳು ವಿಫಲ

    ರಾಯಚೂರು: ಜನರ ಹಿತ ಕಾಪಾಡುವಲ್ಲಿ ರಾಷ್ಟ್ರೀಯ ಪಕ್ಷಗಳು ವಿಫಲವಾಗಿದ್ದು, ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಜನ ರೋಸಿ ಹೋಗಿದ್ದರೆ, ಸರ್ಕಾರದ ವೈಫಲ್ಯ ಎತ್ತಿ ತೋರಿಸುವಲ್ಲಿ ವಿರೋಧ ಪಕ್ಷದ ಜವಾಬ್ದಾರಿ ನಿರ್ವಹಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಹೇಳಿದರು.

    ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಭ್ರಷ್ಟಾಚಾರ ಮುಕ್ತ, ನಿಷ್ಪಕ್ಷಪಾತ ಸರ್ಕಾರ ನೀಡುವ ನಿಟ್ಟಿನಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದರು.

    ಈಗಾಗಲೇ ಎರಡು ಹಂತದಲ್ಲಿ 19 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಉಳಿದ ಕ್ಷೇತ್ರಗಳಿಗೆ ಶೀಘ್ರ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುವುದು. ಸಂವಿಧಾನದ ಆಶಯದಂತೆ ಜನಪರವಾದ, ಪ್ರಾಮಾಣಿಕ ಶಾಸಕರನ್ನು ಜನರು ಆಯ್ಕೆ ಮಾಡಬೇಕಾಗಿದೆ.

    ಜನರ ಸಮಸ್ಯೆಗಳನ್ನು ಬಿಟ್ಟು ಬಿಜೆಪಿ ಕೋಮುವಾದ, ದ್ವೇಷ ಹರಡುವ ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಜನರ ಹಿತಕ್ಕಿಂತ ಅಧಿಕಾರ ಮುಖ್ಯವಾಗಿದ್ದು, ಅಭಿವೃದ್ಧಿ ಮತ್ತು ಜನರ ಹಿತಕ್ಕಾಗಿ ಎಸ್‌ಡಿಪಿಐಗೆ ಜನರು ಬೆಂಬಲಿಸಬೇಕು ಎಂದರು.

    ಪಕ್ಷದ ಜಿಲ್ಲಾಧ್ಯಕ್ಷ ತೌಸೀಫ್ ಅಹ್ಮದ್, ಪದಾಧಿಕಾರಿಗಳಾದ ಜೀಲಾನಿ ಪಾಷಾ, ಸೈಯದ್ ಇರ್ಫಾನ್, ಸೈಯದ್ ಇಸಾಕ್ ಹುಸೇನ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts