More

    ನೂತನ ರಾಯಚೂರು ವಿವಿಗೆ ಕೆಕೆಆರ್‌ಡಿಬಿಯಿಂದ ಪ್ರತಿ ವರ್ಷ 100 ಕೋಟಿ ರೂ. ಅನುದಾನ ನೀಡಿ : ಡಾ.ರಜಾಕ್ ಉಸ್ತಾದ್ ಒತ್ತಾಯ

    ರಾಯಚೂರು: ನೂತನ ರಾಯಚೂರು ವಿಶ್ವವಿದ್ಯಾಲಯ ಸ್ಥಾಪನೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ವಿವಿ ಅಭಿವೃದ್ಧಿ ನಿಟ್ಟಿನಲ್ಲಿ ಐದು ವರ್ಷಗಳ ಕಾಲ ಕೆಕೆಆರ್‌ಡಿಬಿಯಿಂದ ಪ್ರತಿ ವರ್ಷ 100 ಕೋಟಿ ರೂ. ಅನುದಾನ ಒದಗಿಸಬೇಕು ಎಂದು ರಾಯಚೂರು ವಿವಿ ಹೋರಾಟ ಸಮಿತಿ ಸಂಚಾಲಕ ಡಾ.ರಜಾಕ್ ಉಸ್ತಾದ್ ಒತ್ತಾಯಿಸಿದರು.

    ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಈ ಕುರಿತಂತೆ ಮುಖ್ಯಮಂತ್ರಿಗೆ ಒತ್ತಾಯಿಸುವಂತೆ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಜನಪ್ರತಿನಿಧಿಗಳಿಗೆ ಪತ್ರವನ್ನು ಬರೆದು ಮನವಿ ಮಾಡಲಾಗುವುದು ಎಂದರು.

    ಹೊಸ ವಿವಿಗಳ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ದೊರೆಯುವುದಿಲ್ಲ. ಅದಕ್ಕೆ ಕೆಲವು ವರ್ಷಗಳ ಹಿಂದೆ ಸ್ಥಾಪನೆಯಾದ ವಿವಿಗಳ ಪರಿಸ್ಥಿತಿಗಳನ್ನು ನೋಡಿದಾಗ ಅರ್ಥವಾಗುತ್ತದೆ. ಈಗಾಗಲೇ ಕೆಕೆಆರ್‌ಡಿಬಿಯಿಂದ ಕೊಪ್ಪಳದ ಇಂಜಿನಿಯರಿಂಗ್ ಕಾಲೇಜಿಗೆ 100 ಕೋಟಿ ರೂ. ಸೇರಿ ಬೀದರ್, ಕಲಬುರಗಿಯ ಹಲವು ಕಾಮಗಾರಿಗಳಿಗೆ ಅನುದಾನ ನೀಡಲಾಗಿದ್ದು, ಅದರಂತೆ ನೂತನ ವಿವಿಗೆ ಅನುದಾನ ನೀಡಬೇಕು.

    ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಸೆಪ್ಟೆಂಬರ್ ನಂತರ ಆರಂಭವಾಗಲಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿವಿ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲು 4 ತಿಂಗಳ ಕಾಲಾವಕಾಶವಿದೆ. ಈ ಹಿಂದೆ ಮಾಜಿ ಕುಲಪತಿ ಪ್ರೊ.ಕುಟಿನೋ ನೇತೃತ್ವದ ಸಮಿತಿ ನೂತನ ವಿವಿ ಸ್ಥಾಪನೆಗೆ ಸಂಬಂಧಿಸಿದಂತೆ ಆಸ್ತಿ ವಿಭಜನೆ ಹಾಗೂ ಎಷ್ಟು ಹಣ ನೀಡಬೇಕು ಎನ್ನುವ ಪಟ್ಟಿಯನ್ನು ಸರ್ಕಾರಕ್ಕೆ ನೀಡಿದ್ದಾರೆ.

    ಗುಲ್ಬರ್ಗ ವಿವಿ ಹೆಸರಿನಲ್ಲಿರುವ ಸ್ಥಳೀಯ ಸ್ನಾತಕೋತ್ತರ ಕೇಂದ್ರದ ಭೂಮಿಯನ್ನು ರಾಯಚೂರು ವಿವಿಗೆ ಹೆಸರಿಗೆ ವರ್ಗಾವಣೆ ಮಾಡಬೇಕು. ಕ್ಯಾಬಿನೇಟ್‌ನಲ್ಲಿ ಘೋಷಣೆ ಮಾಡಿರುವ 2.59 ಕೋಟಿ ರೂ. ಸಂಬಳ ನೀಡಲು ಸಾಕಾಗುವುದಿಲ್ಲ. ವಿವಿ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ ಎಂದು ಡಾ.ರಜಾಕ್ ಉಸ್ತಾದ್ ಹೇಳಿದರು. ಹೋರಾಟ ಸಮಿತಿ ಪದಾಧಿಕಾರಿಗಳಾದ ವೀರೇಶ ಹೀರಾ, ಶಿವಕುಮಾರ ಯಾದವ್, ಅಶೋಕಕುಮಾರ ಜೈನ್, ಮಹ್ಮದ್ ರಫಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts