More

    ಕೈಗಾರಿಕಾ ಪ್ರದೇಶದ ಹದ್ದುಬಸ್ತಿಗೆ ಕ್ರಮಕೈಗೊಳ್ಳಿ

    ರಾಯಚೂರು: ಜಿಲ್ಲೆಯ ದೇವದುರ್ಗ ಕೈಗಾರಿಕಾ ಪ್ರದೇಶದ ಹದ್ದುಬಸ್ತು ಗುರುತಿಸುವ ಕಾರ್ಯವನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅಧಿಕಾರಿಗಳಿಗೆ ಸೂಚಿಸಿದರು.

    ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಭೆ ಅಧ್ಯಕ್ಷತೆ ವಹಿಸಿ ಗುರುವಾರ ಮಾತನಾಡಿ, ಹದ್ದುಬಸ್ತು ಗುರುತಿಸುವ ಕಾರ್ಯ ಒಂದು ವರ್ಷದಿಂದ ವಿಳಂಬವಾಗುತ್ತಾ ಬಂದಿದ್ದು, ಕೂಡಲೇ ಮುಗಿಸುವಂತೆ ಆದೇಶಿಸಿದರು. ಕೆಐಎಡಿಬಿಗೆ ಸಂಬಂಧಿಸಿದಂತೆ ಜಿಲ್ಲೆ ವ್ಯಾಪ್ತಿಯ ಕಡತಗಳನ್ನು ಜಿಲ್ಲೆಯ ಕಚೇರಿಯಲ್ಲಿಡಬೇಕು. ಪ್ರತಿಯೊಂದು ಕಡತವನ್ನು ಬಳ್ಳಾರಿ ಕಚೇರಿಗೆ ಕಳುಹಿಸುವುದು ಸೂಕ್ತವಲ್ಲ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಎಲ್ಲ ಕಡತಗಳನ್ನು ಜಿಲ್ಲೆಗೆ ತರಿಸಿಕೊಳ್ಳಬೇಕು. ಕೆಐಎಡಿಬಿಯಿಂದ ನಿರ್ಮಿಸಲಾದ ವಸತಿ ಗೃಹ ಮತ್ತು ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ 155 ಅರ್ಜಿಗಳು ಬಂದಿದ್ದು, ಅದರಲ್ಲಿ 32 ಅರ್ಜಿದಾರರು ಶೇ.20ರಷ್ಟು ಮತ್ತು 26 ಅರ್ಜಿದಾರರು ಶೇ.100ರಷ್ಟು ಹಣ ಪಾವತಿಸಿದ್ದಾರೆ. ಕಳೆದ ಬಾರಿಯ ಸಭೆಯಲ್ಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಚರ್ಚೆಯಾಗಿದ್ದರೂ ಪ್ರಗತಿ ಕಂಡು ಬಂದಿಲ್ಲ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಮೆಘಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆಗಾಗಿ ಈವರೆಗೆ 690 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲು ನೋಟಿಸ್ ನೀಡಲಾಗಿದೆ. ಸರ್ವೇ ಇಲಾಖೆ ಮೂಲಕ ಜೆಎಂಸಿ ಕಾರ್ಯವನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು. ಕೈಗಾರಿಕೆ ಸ್ಥಾಪಿಸಲು ಅರ್ಜಿ ಸಲ್ಲಿಸಿದವರಿಗೆ ಜಾಗ ನೀಡಲು ವಿಳಂಬ ಮಾಡಬಾರದು ಎಂದು ಚಂದ್ರಶೇಖರ ನಾಯಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ಜಿಪಂ ಸಿಇಒ ಶಶಿಧರ ಕುರೇರ, ಕೈಗಾರಿಕೆ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕ ಬಸವರಾಜ ಯಾಕಂಚಿ, ಹತ್ತಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷ ವಿ.ಲಕ್ಷ್ಮಿರೆಡ್ಡಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts