More

    ತೈಲ ಬೆಲೆ ಏರಿಕೆ ನೀತಿ ಕೈಬಿಡಿ

    ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ | ಸೈಕಲ್ ತುಳಿದ ಮುಖಂಡರು

    ರಾಯಚೂರು: ಜನರಿಗೆ ಆರ್ಥಿಕ ಹೊರೆ ಉಂಟು ಮಾಡುತ್ತಿರುವ ತೈಲ ಬೆಲೆ ಏರಿಕೆ ನೀತಿಯನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಡಾ.ಹಂಪಣ್ಣಗೆ ಮನವಿ ಸಲ್ಲಿಸಲಾಯಿತು.

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಗಣನೀಯ ಪ್ರಮಾಣದ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಎಂದು ಕಾಣದಷ್ಟು ಏರಿಕೆ ಮಾಡುವ ಮೂಲಕ ಜನ ಸಾಮಾನ್ಯರಿಗೆ ಹೊರೆ ಉಂಟು ಮಾಡಿದೆ ಎಂದು ದೂರಿದರು.

    ದೇಶದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರಕ್ಕೆ ತಕ್ಕಂತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ, ಇಳಿಕೆ ಮಾಡಲಾಗುತ್ತಿತ್ತು. ಆದರೆ ಇಂದು ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗಿದ್ದರೂ ಕೇಂದ್ರ ಸರ್ಕಾರ ಹೆಚ್ಚಿನ ಶುಲ್ಕ ವಿಧಿಸುವ ಮೂಲಕ ಜನರನ್ನು ಶೋಷಣೆ ಮಾಡುತ್ತಿದೆ.

    ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಆರೇಳು ವರ್ಷದಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಅಧಿಕ ಶುಲ್ಕ ವಿಧಿಸುವ ಮೂಲಕ 18 ಲಕ್ಷ ಕೋಟಿ ರೂ. ಸಂಗ್ರಹಿಸಿದ್ದು, ಬೆಲೆ ಏರಿಕೆ ನೀತಿಯಿಂದ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ.

    ಕೂಡಲೇ ತೈಲ ಬೆಲೆಯ ಅಧಿಕ ಶುಲ್ಕ ಕಡಿಮೆ ಮಾಡಿ, ಜನಸಾಮಾನ್ಯರ ಮೇಲಾಗುತ್ತಿರುವ ಆರ್ಥಿಕ ಹೊರೆ ಕಡಿಮೆ ಮಾಡಬೇಕು. ಇಲ್ಲವಾದರಲ್ಲಿ ಪಕ್ಷದ ವತಿಯಿಂದ ತೀವ್ರ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

    ಶಾಸಕ ಬಸನಗೌಡ ದದ್ದಲ್, ಎಂಎಲ್ಸಿಗಳಾದ ಎನ್.ಎಸ್.ಬೋಸರಾಜು, ಬಸವರಾಜ ಪಾಟೀಲ್ ಇಟಗಿ, ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ, ಮುಖಂಡರಾದ ಎ.ವಸಂತಕುಮಾರ, ಕೆ.ಶಾಂತಪ್ಪ, ಜಯಣ್ಣ, ಜಿ.ಬಸವರಾಜರೆಡ್ಡಿ, ನಿರ್ಮಲಾ ಬೆಣ್ಣಿ, ಶಶಿಕಲಾ ಭೀಮರಾಯ ಹಾಗೂ ಇತರರಿದ್ದರು.

    ತೈಲ ಬೆಲೆ ಏರಿಕೆ ನೀತಿ ಕೈಬಿಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts