More

    ತೈಲ ಬೆಲೆ ಏರಿಕೆಗೆ ಕಡಿವಾಣ ಹಾಕಲು ಸಿಪಿಐಎಂ ಒತ್ತಾಯ

    ರಾಯಚೂರು: ಕರೊನಾ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರ ಇಂಧನ ಬೆಲೆ ಹೆಚ್ಚಿಸಿ, ಜನಸಾಮಾನ್ಯರಿಗೆ ಆರ್ಥಿಕ ಹೊರೆ ಉಂಟು ಮಾಡುತ್ತಿದೆ ಎಂದು ಸಿಪಿಐಎಂ ಆರೋಪಿಸಿದೆ.

    ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಕೂಡಲೇ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿತು. ಲಾಕ್‌ಡೌನ್‌ನಿಂದಾಗಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕಳೆದ ಒಂದು ವರ್ಷದಲ್ಲಿ ಪೆಟ್ರೋಲ್ ಬೆಲೆಯನ್ನು 25 ರೂ. ಹೆಚ್ಚಿಸಲಾಗಿದೆ. ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಿದ್ದರೂ ಉಭಯ ಸರ್ಕಾರಗಳು ಹೆಚ್ಚಿನ ಸುಂಕ ವಿಧಿಸುವ ಮೂಲಕ ತೈಲ ಬೆಲೆ ಏರಿಕೆಗೆ ಕಾರಣವಾಗಿವೆ. ತೈಲ ಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯೂ ಏರುತ್ತಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರು ಬದುಕು ನಡೆಸಲು ಪರದಾಡುವಂತಾಗಿದೆ. ಕೂಡಲೇ ತೈಲ ಬೆಲೆ ಏರಿಕೆ ಹಿಂಪಡೆಬೇಕು ಎಂದು ಒತ್ತಾಯಿಸಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts