ನ.11ಕ್ಕೆ ಒನಕೆ ಓಬವ್ವ ಜಯಂತಿ ಆಚರಣೆ: ಕೆ.ಇ.ಕುಮಾರ

blank

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಛಲವಾದಿ ಸಮುದಾಯದಿಂದ ನ.11ರಂದು ವೀರರಾಣಿ ವನಕೆ ಓಬವ್ವ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ವನಕೆ ಓಬವ್ವ ಜಯಂತ್ಯೋತ್ಸವ ಸಮಿತಿ ಸಂಚಾಲಕ ಕೆ.ಇ.ಕುಮಾರ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಬೆಳಿಗ್ಗೆ 11 ಗಂಟೆಗೆ ನಗರದ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೂ ಮೊದಲು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ರಂಗಮಂದಿರದ ವರೆಗೆ ಓಬವ್ವಳ ಭಾವಚಿತ್ರ ಮೆರವಣಿಗೆ ಮಾಡಲಾಗುವುದು ಎಂದರು.

ಸರ್ಕಾರಿ ಪ್ರಥಮ ಧರ್ಜೆ ಕಾಲೇಜಿನ ಉಪನ್ಯಾಸಕಿ ಮಹಾದೇವಿ ಅಮರೇಶ ಗೋಪಾಳಪುರ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮಕ್ಕಾಗಿ ಸಮುದಾಯದಿಂದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಪ್ರತಿಯೊಬ್ಬರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಎಂ.ವಸಂತ, ಎಂ.ಮಾರೆಪ್ಪ, ವಿಶ್ವನಾಥ ಪಟ್ಟಿ, ವಿಜಯಕುಮಾರ, ವೀರೇಶ ಸೇರಿದಂತೆ ಇತರರಿದ್ದರು.

Share This Article

ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips

ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…

ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips

ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…

Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!

Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು  ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…