More

    ಉದ್ಯಾನವನ ಅತಿಕ್ರಮಣ ತೆರವಿಗೆ ದಸಂಸ ಆಗ್ರಹ

    ರಾಯಚೂರು: ನಗರದ ಸ್ಟೇಷನ್ ರಸ್ತೆಯ ಸಾರ್ವಜನಿಕ ಉದ್ಯಾನವನ ಜಾಗವನ್ನು ಅತಿಕ್ರಮಿಸಿ ನಿರ್ಮಾಣ ಮಾಡಲಾಗಿರುವ ದೇವಸ್ಥಾನ ಮತ್ತು ಮಂದಿರಗಳನ್ನು ತೆರವುಗೊಳಿಸಲು ಜಿಲ್ಲಾಡಳಿತ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ದಸಂಸ ಮುಖಂಡ ಎಂ.ನರಸಪ್ಪ ಒತ್ತಾಯಿಸಿದರು.

    ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಜಿಲ್ಲಾಡಳಿತಕ್ಕೆ ಈ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದರೂ ಕ್ರಮಕೈಗೊಳ್ಳದ ಕಾರಣ ನ್ಯಾಯಾಲಯ ಮೊರೆ ಹೋಗಲಾಗಿದೆ ಎಂದರು.

    ಸಾರ್ವಜನಿಕ ಉದ್ಯಾನವನದಲ್ಲಿ ಅನೇಕ ಮಂದಿರ, ದೇವಸ್ಥಾನಗಳ ನಿರ್ಮಾಣಕ್ಕೆ ಅನಧಿಕೃತವಾಗಿ ಅವಕಾಶ ನೀಡಲಾಗಿದೆ. ಸಾಯಿ ಮಂದಿರ ಸೇರಿದಂತೆ ಅನೇಕರು ಟ್ರಸ್ಟ್‌ಗಳನ್ನು ರಚಿಸಿಕೊಂಡು ಸಾರ್ವಜನಿಕ ದೇಣಿಗೆ ಸಂಗ್ರಹಿಸುತ್ತಿರುವುದು ಕಾನೂನು ಬಾಹಿರವಾಗಿದೆ.

    ದೇವಸ್ಥಾನಗಳನ್ನು ಆದಾಯದ ಮೂಲ ಮಾಡಿಕೊಂಡಿರುವ ಟ್ರಸ್ಟ್‌ಗಳಿಂದ ಸರ್ಕಾರ ಮತ್ತು ಜನರಿಗೆ ಯಾವುದೇ ಆದಾಯವಿಲ್ಲದಂತಾಗಿದೆ. ಅನಧಿಕೃತ ದೇವಸ್ಥಾನಗಳ ನಿರ್ಮಾಣಕ್ಕೆ ಚುನಾಯಿತ ಜನಪ್ರತಿನಿಧಿಗಳು ಸರ್ಕಾರದ ಹಣವನ್ನು ದೇಣಿಗೆಯಾಗಿ ನೀಡುತ್ತಿದ್ದಾರೆ ಎಂದು ದೂರಿದರು.

    ಈಗಾಗಲೇ ನ್ಯಾಯಾಲಯ, ಸರ್ಕಾರಿ ಉದ್ಯಾನದಲ್ಲಿ ನಿರ್ಮಾಣವಾಗಿರುವ ಅನಧಿಕೃತ ಕಟ್ಟಡ ತೆರವುಗೊಳಿಸುವಂತೆ ಸೂಚಿಸಿದ್ದರೂ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ. ನ್ಯಾಯಾಲಯ ಮಧ್ಯಪ್ರವೇಶಿಸಿ ತೆರವಿಗೆ ನಿರ್ದೇಶನ ನೀಡುವಂತೆ ಸ್ಥಳೀಯ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ ಎಂದು ಎಂ.ನರಸಪ್ಪ ತಿಳಿಸಿದರು.

    ಇದನ್ನೂ ಓದಿ: ಮೀನು ಮೌಲ್ಯವರ್ಧಿತ ಉತ್ಪನ್ನಗಳಿಗೆ ಬೇಡಿಕೆ, ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಹೇಶ್ ಕುಮಾರ್ ಹೇಳಿಕೆ

    ಸುದ್ದಿಗೋಷ್ಠಿಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಹನುಮಂತ ಅರೋಲಿ, ಪದಾಧಿಕಾರಿಗಳಾದ ಚಿದಾನಂದ ಅರೋಲಿ, ನರೇಶ, ನಾಗರಾಜ, ಸುನೀಲ್, ಗೌತಮ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts