ವಿಶ್ವಕರ್ಮ ಯೋಜನೆಯಿಂದ ಕುಶಲಕರ್ಮಿಗಳ ಆರ್ಥಿಕ ಸಬಲೀಕರಣ: ಹುಡೇದ್

P M VISWA KARMA SCHEEM ANNUAL DAY FUNCTION AND VIDEO CONFERENCE WITH PM IN RURAL SELF EMPLOYEMENT TRAINING INSTITUTE RAICHUR (2)
Published on

ರಾಯಚೂರು: ಕೇಂದ್ರ ಸರ್ಕಾರವು ಸ್ವಾವಲಂಬಿ ಬದುಕು ನಡೆಸಲು ಅನುಕೂಲ ಆಗುವ ಹಿನ್ನೆಲೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದ್ದು, ಯೋಜನೆಯ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಸಿಡಾಕ್ ಜಂಟಿ ನಿರ್ದೇಶಕ ಜಿ.ಯು.ಹುಡೇದ್ ಹೇಳಿದರು.

ನಗರದ ಆಶಾಪುರ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಿಎಂ ವಿಶ್ವಕರ್ಮ ಯೋಜನೆಯ 3ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿರುವ ಕುಶಲಕರ್ಮಿಗಳನ್ನು ಆರ್ಥಿಕವಾಗಿ ಸ್ವಾಲಂಬಿಗಳಾಗಿಸುವ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆ ನಿರ್ಮಾಣವಾಗಿದೆ. ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ತರಬೇತಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳಬಹುದು.

ಇದಲ್ಲದೆ ಈ ಯೋಜನೆಯಡಿ ಬ್ಯಾಂಕುಗಳ ಮುಖಾಂತರ ಸಾಲ ಸೌಲಭ್ಯ ಕೂಡ ಲಭ್ಯವಿದ್ದು, ಅರ್ಹ ಫಲಾನುಭವಿಗಳು ಸರಿಯಾದ ಮಾಹಿತಿ ಪಡೆದುಕೊಂಡು ಯೋಜನೆಯ ಸೌಲಭ್ಯ ಪಡೆಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ, ಪಿಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಆನಂದ ಕುಮಾರ್ ಪ್ರಮುಖರಾದ ಸಿಬ್ರಾರಾಮ್ ಮಿಶ್ರಾ, ಸೋಮಶೇಖರ್, ಶರಣಬಸವ ಪಾಟೀಲ್, ರಂಜಿತ್ ಕುಮಾರ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net