Friday, 16th November 2018  

Vijayavani

ಜನಾರ್ದನರೆಡ್ಡಿ ಕೇಸ್ ಬೆನ್ನಲ್ಲೇ ಡಿಕೆಶಿಗೆ ಬಂಧನ ಭೀತಿ - ಇಡಿಯಿಂದ 3ನೇ ಬಾರಿ ಇಡಿ ನೋಟಿಸ್ ಜಾರಿ        ಆ್ಯಂಬಿಂಡೆಟ್ ಪ್ರಕರಣದಲ್ಲಿ ಇಡಿ ಹೆಸರಿಗೆ ಆಕ್ಷೇಪ - ಸಿಸಿಬಿ ವಿರುದ್ಧ ಇಡಿ ಜಂಟಿ ನಿರ್ದೇಶಕ ಗರಂ        ಸಚಿವ ಸಂಪುಟ ವಿಸ್ತರಣೆಗೆ ಧನುರ್ಮಾಸದ ಎಫೆಕ್ಟ್ - ಸದ್ಯಕ್ಕಿಲ್ಲ ಆಕಾಂಕ್ಷಿಗಳಿಗೆ ಸಚಿವ ಭಾಗ್ಯ - ಕಾಂಗ್ರೆಸ್ಸಿಗರಲ್ಲಿ ಮತ್ತೆ ಅಸಮಾಧಾನ        ರಾಜ್ಯಾದ್ಯಂತ ಭುಗಿಲೆದ್ದ ರೈತರ ಹೋರಾಟದ ಕಿಚ್ಚು - ರೈತರನ್ನು ಭೇಟಿಯಾಗುವುದಾಗಿ ಹೇಳಿದ ಕುಮಾರಸ್ವಾಮಿ        ಗಾಂಧಿ ಕುಟುಂಬ ಬಿಟ್ಟು ಬೇರೆಯವರು ಎಐಸಿಸಿ 5 ಅಧ್ಯಕ್ಷರಾಗಲಿ - ಕಾಂಗ್ರೆಸ್​ಗೆ ಪ್ರಧಾನಿ ಮೋದಿಯಿಂದ ನೇರ ಸವಾಲು        ತಮಿಳುನಾಡಿನಾದ್ಯಂತ ಗಜ ಚಂಡಮಾರುತದ ಅರ್ಭಟ - 20ಕ್ಕೂ ಹೆಚ್ಚು ಮಂದಿ ದುರ್ಮರಣ - ಅಪಾರ ಆಸ್ತಿ ಪಾಸ್ತಿ, ಬೆಳೆ ನಾಶ       
Breaking News

ಖೋಟಾ ನೋಟು ದಂಧೆ: ರಾಯಚೂರಿನಲ್ಲಿ 7 ಜನರ ಬಂಧನ

Monday, 02.07.2018, 6:56 PM       No Comments

ರಾಯಚೂರು: ಜಿಲ್ಲೆಯಲ್ಲಿ ಖೋಟಾ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬಸಾಪುರ ಕ್ಯಾಂಪಿನ ಟಿ.‌ ಶ್ರೀನಿವಾಸ, ಹುಸೇನನಗರದ ರಾಮಕೃಷ್ಣ, ತಳವಾರದೊಡ್ಡಿಯ ಅಯ್ಯಾಳಪ್ಪ, ಗದ್ವಾಲ್ ತಾಲೂಕಿನ ಹನುಮಂತ, ಜಾಲಹಳ್ಳಿಯ ಪ್ರಕಾಶ, ಚಿಕ್ಕಬೂದೂರಿನ ಬಸವರಾಜ ಮತ್ತು ರಾಮಲಿಂಗೇಶ್ವರ ಕಾಲೋನಿಯ ಸೈಯದ್ ಉಸ್ಮಾನ ಬಂಧಿತ ಆರೋಪಿಗಳು. ಬಂಧಿತರು ಬೆಂಗಳೂರು ಮೂಲದ ಅಬ್ದುಲ್​ ರಹಮಾನ್​ ಎಂಬುವವನಿಂದ ಖೋಟಾ ನೋಟು ಮುದ್ರಣ ಸಾಮಗ್ರಿಯನ್ನು ಖರೀದಿಸಿದ್ದರು ಎಂದು ತಿಳಿದು ಬಂದಿದೆ.

ಬಂಧಿತರಿಂದ 4.52 ಲಕ್ಷ ರೂ. ಮೌಲ್ಯದ 2,000 ರೂ. ಮತ್ತು 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಮತ್ತು ಖೋಟಾ ನೋಟು ಕಾಗದ ಮತ್ತು ರಾಸಾಯನಿಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಮೊದಲು ಜಿಲ್ಲೆಯ ದೇವದುರ್ಗಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

Back To Top