ರಾಯಚೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ವಿಚಾರಣೆಗೆ ಅನುಮತಿ ನೀಡಿರುವುದು ಖಂಡನೀಯ ಎಂದು ರಾಯಚೂರು ಕನಕದಾಸ ಉದ್ಯಾನ ಸಮಿತಿಯ ಅಧ್ಯಕ್ಷ ಆಂಜನೇಯ್ಯ ಹೇಳಿದರು.
ಇದನ್ನೂ ಓದಿ: ಸಮಾಜಹಿತಕ್ಕಿಂತ ಸ್ವಾರ್ಥಹಿತ ಹೆಚ್ಚಳ: ಪ್ರೊ.ಎಸ್.ಜಿ ಸಿದ್ದರಾಮಯ್ಯ ಅಭಿಪ್ರಾಯ
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿ, ಮುಡಾ ಹಗರಣದ ವಿಚಾರವಾಗಿ ರಾಜ್ಯಪಾಲರು ನಿಯಮ ಬಾಹೀರವಾಗಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ನೀಡಿರುವುದು ಖಂಡನೀಯ ಎಂದರು.
ಜನಪರವಾದ ಆಡಳಿತವನ್ನು ನಡೆಸುತ್ತಿರುವ ಸಿದ್ದರಾಮಯ್ಯ ಅವರ ಬೆಳವಣಿಗೆಯನ್ನು ತಡೆದುಕೊಳ್ಳಲು ಆಗದೆ ರಾಜಕೀಯ ದ್ವೇಶದಿಂದ ಪ್ರಾಸಿಕ್ಯೂಷನ್ ವಿಚಾರಣೆಗೆ ಅನುಮತಿ ನೀಡಲಾಗಿದೆ ಇದನ್ನು ಖಂಡಿಸಿ ಆ.27ರಂದು ರಾಜ್ಯಭವನ ಚಲೋ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷ ಬೂದೆಪ್ಪ ಇದ್ದರು.