17.8 C
Bengaluru
Wednesday, January 22, 2020

ನಗರ ನಿವಾಸಿಗಳಿಗೆ ಸೌಕರ್ಯ ಕಲ್ಪಿಸಿ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ರಾಯಚೂರು ಉಳಿಸಿ ಹೋರಾಟ ಸಮಿತಿ ಪ್ರತಿಭಟನೆ

ರಾಯಚೂರು: ನಗರ ನಿವಾಸಿಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ರಾಯಚೂರು ಉಳಿಸಿ ಹೋರಾಟ ಸಮಿತಿ ಸೋಮವಾರ ಪ್ರತಿಭಟನೆ ನಡೆಸಿ, ನಗರಸಭೆ ಮುಖ್ಯಾಧಿಕಾರಿ ಮಹೇಂದ್ರರೆಡ್ಡಿಗೆ ಮನವಿ ಸಲ್ಲಿಸಿತು.

ರಾಯಚೂರು ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದ್ದರೂ ಅಗತ್ಯ ಸೌಕರ್ಯಗಳಿಲ್ಲದ ಕಾರಣ ಜನರು ಸಂಕಷ್ಟ ಎದುರಿಸುವಂತಾಗಿದೆ. ಕೂಡಲೇ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಪ್ರಮುಖ ರಸ್ತೆಗಳು ಹದಗೆಟ್ಟಿದ್ದು, ವಾಹನ ಸವಾರರು ಸಮಸ್ಯೆ ಎದುರಿಸುವಂತಾಗಿದೆ. ತಗ್ಗುಗುಂಡಿ ಮುಚ್ಚಲು ನಗರಸಭೆ ಮುಂದಾಗುತ್ತಿಲ್ಲ. ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡುತ್ತಿದ್ದರಿಂದ ಅಪಘಾತಗಳಿಗೆ ಕಾರಣವಾಗುವಂತಾಗಿದೆ.

ಐದು ವರ್ಷಗಳಿಂದ ನಡೆಯುತ್ತಿರುವ 24 ಗಂಟೆ ನೀರು ಸರಬರಾಜು ಯೋಜನೆ ಕಾಮಗಾರಿ ತ್ವರಿತವಾಗಿ ಮುಗಿಸಬೇಕು. ತ್ಯಾಜ್ಯ ವಿಲೇವಾರಿಗೆ ನಗರಸಭೆ ಕ್ರಮಕ್ಕೆ ಮುಂದಾಗುತ್ತಿಲ್ಲ. ದುರ್ನಾತದಿಂದ ಜನರು ರಸ್ತೆಯಲ್ಲಿ ಓಡಾಡಲು ಹಿಂಜಿರಿಯುವಂತಾಗಿದೆ. ರಸ್ತೆಯಲ್ಲಿನ ಧೂಳು ತೆರವುಗೊಳಿಸುತ್ತಿಲ್ಲ.

ರಸ್ತೆಗೆ ಹೊಂದಿಕೊಂಡು ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾಗಿದ್ದು, ಸುರಕ್ಷತಾ ಕ್ರಮ ಕೈಗೊಳ್ಳಲಾಗಿಲ್ಲ. ನಗರದ ಬಹುತೇಕ ರಸ್ತೆ, ಬಡಾವಣೆಗಳಲ್ಲಿ ಬೀದಿ ದೀಪದ ವ್ಯವಸ್ಥೆಯಿಲ್ಲದ ಕಾರಣ ಅಕ್ರಮಗಳಿಗೆ ಎಡೆಮಾಡಿಕೊಟ್ಟಂತಾಗಿದೆ. ಸಾರ್ವಜನಿಕ ಶೌಚಾಲಯವಿಲ್ಲದ ಕಾರಣ ಜನರು ಸಂಕಷ್ಟ ಎದುರಿಸುತ್ತಿದ್ದಾರೆ.

ಕೂಡಲೇ ನಗರಸಭೆ ಆಡಳಿತ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ಸಂಘಟನೆ ಮುಖಂಡರಾದ ಡಾ.ರಜಾಕ್ ಉಸ್ತಾದ್, ಅಶೋಕಕುಮಾರ ಜೈನ್. ಶಿವಕುಮಾರ ಯಾದವ್, ವೀರೇಶ ಹೀರಾ, ಎನ್.ಮಹಾವೀರ, ಕೆ.ಈ.ಕುಮಾರ, ಪ್ರಭು ನಾಯಕ, ಶ್ಯಾಮಸುಂದರ್, ತುಳಜಾರಾಮ್, ಮಹ್ಮದ್ ರಫೀಕ್ ಹಾಗೂ ಇತರರಿದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...