More

    ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳಿ

    ರಾಯಚೂರು: ರಾಜಕಾಲುವೆ, ಮಾವಿನ ಕೆರೆಯನ್ನು ಒತ್ತುವರಿ ಮಾಡಿಕೊಂಡವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪ್ರಗತಿಪರ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಯೂನಿಯನ್‌ನಿಂದ ಜಿಲ್ಲಾಧಿಕಾರಿ ಕಚೇರಿಯ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಗುರುವಾರ ಮನವಿ ಸಲ್ಲಿಸಲಾಯಿತು.

    ಇತ್ತೀಚೆಗೆ ಸುರಿದ ಭಾರಿ ಮಳೆಗೆ ನಗರದ ವಿವಿಧ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ, ರಸ್ತೆಗಳು ಜಲಾವೃತವಾಗಿ ಜನರು ತೊಂದರೆ ಅನುಭವಿಸುವಂತಾಗಿದ್ದು, ರಾಜಕಾಲುವೆ ಹಾಗೂ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ಪ್ರತಿಭಟನಾಕಾರರು ದೂರಿದರು.

    ನಗರದಲ್ಲಿ ಚರಂಡಿ ನೀರು ಸರಾಗವಾಗಿ ಹರಿದು ಹೋಗುವ ರಾಜ ಕಾಲುವೆಯನ್ನು ಕೆಲ ಪ್ರಭಾರಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಕಾಲುವೆ ಸಂಪೂರ್ಣ ಮುಚ್ಚಿ ಹೋಗಿದ್ದು, ಮಳೆ ನೀರು ರಾಜಕಾಲುವೆಯಲ್ಲಿ ಹರಿಯದೇ ರಸ್ತೆ ಮೇಲೆ ಹರಿಯುತ್ತಿದೆ ಎಂದರು.

    ಮಳೆ ನೀರು ರಸ್ತೆ ಮೇಲೆ ಹರಿಯುವುದರಿಂದ ರಸ್ತೆ ಕಿತ್ತು ಹೋಗಿ ಸಂಚಾರಕ್ಕೆ ಅಡ್ಡಿಯಾಗಿದೆ. ಒಪೆಕ್ ಆಸ್ಪತ್ರೆಯ ಸಮೀಪ ರೈಲ್ವೆ ಸೇತುವೆ ಕೆಳಗೆ ರಸ್ತೆಯಲ್ಲಿ ಗುಂಡಿ ಬಿದ್ದಿದ್ದು, ಈ ಬಗ್ಗೆ ಸ್ಥಳಿಯರು ನಗರಸಭೆಗೆ ಮನವಿ ಮಾಡಿದ್ದರಿಂದ ತಾತ್ಕಾಲಿಕ ದುರಸ್ತಿ ಮಾಡಲಾಗಿದೆ. ಕೂಡಲೇ ಶಾಶ್ವತ ಪರಿಹಾರ ಒದಗಿಸಬೇಕು. ಕೂಡಲೇ ನಗರದ ವಿವಿಧೆಡೆ ರಾಜಕಾಲುವೆ ಹಾಗೂ ಮಾವಿನಕೆರೆ ಒತ್ತುವರಿ ಮಾಡಿಕೊಂಡವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

    ಸಂಘದ ಕಾರ್ಯದರ್ಶಿ ಕೆ.ತಿಮ್ಮಪ್ಪ, ಪದಾಧಿಕಾರಿಗಳಾದ ತಿಮ್ಮಪ್ಪ ಸ್ವಾಮಿ, ಆನಂದ ಏಗನೂರು, ಸಿದ್ದಪ್ಪ ಮನ್ಸಲಾಪೂರ, ಜಂಬಣ್ಣ, ಸೂರಿ, ಸುಧಾನಂದ, ಪ್ರಕಾಶ ಕುಮಾರ, ನರಸಿಂಹಲು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts