ಧಾರ್ಮಿಕ ಮೌಲ್ಯಗಳ ರಕ್ಷಣೆಯೇ ಗುರಿಯಾಗಲಿ: ಶ್ರೀ ರಂಭಾಪುರಿ ಜಗದ್ಗುರು ಅಭಿಮತ

ರಾಯಚೂರು: ಜೀವನದಲ್ಲಿ ಸುಖ ದುಃಖವನ್ನು ಸಮನಾಗಿ ಸ್ವೀಕರಿಸಬೇಕು, ಕಷ್ಟದಲ್ಲಿದ್ದಾಗ ಜೊತೆಗಿರುವವರನ್ನು ಎಂದಿಗೂ ಮರೆಯಬಾರದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ನಗರದ ಕಿಲ್ಲೆ ಬೃಹನ್ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರಾವಣ ಪುರಾಣ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ, ಸ್ನಾನದಿಂದ ದೇಹ ಶುದ್ಧಿಯಾಗುತ್ತದೆ ಆದರೆ ಮೌನ,ಧ್ಯಾನ ಮತ್ತು ಸತ್ಸಂಗದಿಂದ ಮನಸ್ಸು ಶುದ್ಧಿಯಾಗುತ್ತದೆ ಎಂದರು.
ಉಪವಾಸ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ನಮ್ಮನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡವರನ್ನು ಮರೆತರೂ, ಬೆಳೆಸಿದವರನ್ನು ಮರೆಯಬಾರದು. ದುಡಿಯುವ ಕೈಗೆ ಬಡತನವಿಲ್ಲ. ಆಲಸ್ಯದ ಬದುಕಿಗೆ ನೆಮ್ಮದಿ ಇಲ್ಲ. ಕರ್ತವ್ಯದ ಕಾಲು ದಾರಿಯಲ್ಲಿ ನಡೆಯುವವರಿಗೆ ಯಶಸ್ಸು ನಿಶ್ಚಿತ ಧಾರ್ಮಿಕ ಮೌಲ್ಯಗಳ ಸಂರಕ್ಷಣೆ ನಮ್ಮೆಲ್ಲರ ಗುರಿಯಾಗಬೇಕು ಎಂದರು.

ಇದನ್ನೂ ಓದಿ: ಅಬ್ಬಿಗೇರಿಯಲ್ಲಿ ಅ. 3 ರಿಂದ 12ರವರೆಗೆ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ದಸರಾ ಧರ್ಮ ಸಮ್ಮೇಳನ

ಸತ್ಯ ಧರ್ಮ ನ್ಯಾಯ ನೀತಿ ಎನ್ನುವುದು ದೇವರ ಉಳಿತಾಯ ಖಾತೆಗೆ ಜಮಾ ಮಾಡಿದಂತೆ. ಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುತ್ತದೆ. ವೀರಶೈವ ಧರ್ಮದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಕಾಣಲಾಗುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರ ತತ್ವ ಸಿದ್ಧಾಂತಗಳನ್ನು ಪ್ರಸಾರ ಪಡಿಸಿದ ಕೀರ್ತಿ ಕಿಲ್ಲೆ ಬೃಹನ್ಮಠಕ್ಕೆ ಸಲ್ಲುತ್ತದೆ ಎಂದು ತಿಳಿಸಿದರು.

ಶ್ರಾವಣ ಪುರಾಣದ ಶತಮಾನೋತ್ಸವ ಸಮಾರಂಭ ಹಮ್ಮಿಕೊಂಡಿರುವುದು ಅಪಾರ ಸಂತೋಷ ತಂದಿದೆ. ಶಾಂತಮಲ್ಲ ಶ್ರೀಗಳು ಈ ಭಾಗದಲ್ಲಿ ಧರ್ಮ ಸಂಸ್ಕೃತಿ ಬೆಳೆಸುತ್ತ ಮತ್ತು ಗುರು ಪರಂಪರೆಯ ಮೌಲ್ಯಗಳನ್ನು ಬೋಧಿಸುತ್ತಾ ಮುನ್ನಡೆದಿರುವುದು ಹರುಷ ತಂದಿದೆ ಎಂದರು.

ಇದನ್ನೂ‌ ಓದಿ: ಕನ್ನಡ ಭಾಷೆಯ ಬೆಳವಣಿಗೆಗೆ ಶರಣರ ಕೊಡುಗೆ ಅಪಾರ: ಶಾಂತಮಲ್ಲಿಕಾರ್ಜುನ ಸ್ವಾಮೀಜಿ

ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಗುರಿಯೆಡೆಗೆ ತಲುಪುವ ದಾರಿ ಯಾವುದೆಂಬುದನ್ನು ಅರಿತು ನಡೆಯಬೇಕು. ಜೀವನದಲ್ಲಿ ಕಷ್ಟಗಳು ಬಂದಾಗ ಯಾರ ಹತ್ತಿರ ಸಲಹೆ ಕೇಳುತ್ತೇವೆ ಎಂಬುದು ಮುಖ್ಯ. ಯಾಕೆಂದರೆ ದುರ್ಯೋಧನ ಶಕುನಿಯ ಹತ್ತಿರ ಸಲಹೆ ಕೇಳುತ್ತಿದ್ದ. ಆದರೆ ಅರ್ಜುನ ಶ್ರೀ ಕೃಷ್ಣನ ಬಳಿ ಸಲಹೆ ಕೇಳುತ್ತಿದ್ದ. ಸಕಲ ಜೀವಾತ್ಮರಿಗೆ ಸದಾ ಒಳಿತನ್ನೇ ಬಯಸಿದ ವೀರಶೈವ ಧರ್ಮ ಸಿದ್ಧಾಂತದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಜೀವನ ಮೌಲ್ಯಗಳ ಪರಿಪಾಲನೆ ಮತ್ತು ಅವುಗಳಿಂದ ಉಂಟಾಗುವ ಜ್ಞಾನವನ್ನು ಪಡೆಯಬೇಕೆಂದರು.

ಉದ್ಘಾಟನೆ ಹಾಗೂ ‘ಶ್ರೀ ಗುರುಪಾದ ಶಿವಯೋಗೀಶ್ವರ ಪುರಾಣ ಗ್ರಂಥ’ವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಸ್ ಬೋಸರಾಜು ನೆರವೇರಿಸಿದರು.

ಈ ಸಂದರ್ಭದಲ್ಲಿ ನಿಲಗಲ್ ಮಠದ ಡಾ.ಪಂಚಾಕ್ಷರ ಶಿವಾಚಾರ್ಯರು, ದೇವದುರ್ಗದ ಕಪಿಲ ಸಿದ್ಧರಾಮ ಶಿವಾಚಾರ್ಯರು, ಗಬ್ಬೂರು ಬೂದಿಬಸವ ಶಿವಾಚಾರ್ಯರು, ಕರೇಗುಡ್ಡ ಮಹಾಂತಲಿಂಗ ಶಿವಾಚಾರ್ಯರು, ನವಲಕಲ್ ಅಭಿನವ ಸೋಮನಾಥ ಶಿವಾಚಾರ್ಯರು, ಸೋಮವಾರಪೇಟೆ ಅಭಿನವ ರಾಚೋಟಿ ವೀರಶಿವಾಚಾರ್ಯ ಸ್ವಾಮೀಜಿ, ಸುಲ್ತಾನಪುರದ ಶಂಭು ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ತೆಂಡೆಕೆರೆ ಗಂಗಾಧರ ಶಿವಾಚಾರ್ಯರು, ಬಬಲಾದ ಶಿವಮೂರ್ತಿ ಶಿವಾಚಾರ್ಯರು, ಮಂಗಳವಾರಪೇಟೆಯ ವೀರಸಂಗಮೇಶ್ವರ ಶಿವಾಚಾರ್ಯರು, ರೌಡಕುಂದ ಸಿದ್ಧರಾಮ ಶರಣರು, ಚೇಗುಂಟ ಡಾ. ಕ್ಷೀರಲಿಂಗ ಶರಣರು, ಜಾಗಟಗಲ್ ಬೆಟ್ಟದಯ್ಯಪ್ಪ ತಾತ ಮತ್ತು ಸಾಂಬಯ್ಯಪ್ಪ ತಾತ ಸೇರಿದಂತೆ ಇತರರಿದ್ದರು.

Share This Article

ಪುರುಷರು ಕುಳಿತು or ನಿಂತುಕೊಂಡು ಮೂತ್ರ ವಿಸರ್ಜನೆ ಮಾಡ್ಬೇಕಾ? ಇಲ್ಲಿದೆ ಉಪಯುಕ್ತ ಮಾಹಿತಿ… Urinate Position

ಸಾಮಾನ್ಯವಾಗಿ ಪುರುಷರು ನಿಂತುಕೊಂಡೇ ಮೂತ್ರ ವಿಸರ್ಜನೆ ( Urinate Position ) ಮಾಡುತ್ತಾರೆ. ಆದರೆ, ಈ…

ನಿಮ್ಮ ಅಂಗೈನಲ್ಲಿ H ಚಿಹ್ನೆ ಇದೆಯಾ ನೋಡಿ… ಇದರ ಅರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ! Palmistry

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

Success Secrets: ನಿಮ್ಮ ಜೀವನದಲ್ಲಿ ಈ 4 ಸ್ಥಳಗಳಲ್ಲಿ ಎಂದಿಗೂ ಹಿಂಜರಿಯಬೇಡಿ! ಈ ಕೆಲಸ ಮಾಡಿದ್ರೆ ಸಕ್ಸಸ್‌ ಗ್ಯಾರೆಂಟಿ

ಬೆಂಗಳೂರು: ಆಚಾರ್ಯ ಚಾಣಕ್ಯರನ್ನು ಭಾರತದ ವಿದ್ವಾಂಸರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ. ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ…