More

    ರಾಯಚೂರು ಜಿಲ್ಲಾದ್ಯಂತ ಗಣರಾಜ್ಯೋತ್ಸವ ಸಂಭ್ರಮ

    ರಾಯಚೂರು: ದೇಶದ ಭವ್ಯ ಪರಂಪರೆ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಬಗ್ಗೆ ನಾವೆಲ್ಲರೂ ಯೋಚಿಸಬೇಕಾಗಿದೆ. ಸ್ನೇಹ ಮತ್ತು ಸೌಹಾರ್ದತೆ ಮೂಲಕ ದೇಶದ ಏಕತೆಯನ್ನು ಕಾಪಾಡಬೇಕು ಎಂದು ಜವಳಿ, ಕೈಮಗ್ಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು.

    ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ನಿಮಿತ್ತ ಬುಧವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಕಾಣಿಕೆಯನ್ನು ಮರೆಯುವಂತಿಲ್ಲ ಎಂದರು. ಪೊಲೀಸ್ ಮೀಸಲು ಪಡೆ, ಗೃಹ ರಕ್ಷಕ ದಳ, ಅಗ್ನಿಶಾಮಕ ದಳದಿಂದ ಪಥ ಸಂಚಲನ ನಡೆಯಿತು. ಕೋವಿಡ್ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಮುಂಚೂಣಿ ಸಿಬ್ಬಂದಿಗೆ ಸನ್ಮಾನಿಸಲಾಯಿತು. ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ಡಾ.ಶಿವರಾಜ ಪಾಟೀಲ್, ಕೆ.ಶಿವನಗೌಡ ನಾಯಕ, ಬಸನಗೌಡ ದದ್ದಲ್, ಅಪರ ಜಿಲ್ಲಾಧಿಕಾರಿ ಕೆ.ಆರ್.ದುರಗೇಶ, ಜಿ.ಪಂ. ಸಿಇಒ ನೂರ್ ಜಹರಾ ಖಾನಂ, ಎಸ್ಪಿ ಬಿ.ನಿಖಿಲ್, ಸಹಾಯಕ ಆಯುಕ್ತ ರಜನಿಕಾಂತ್ ಚವ್ಹಾಣ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts