More

    ರಿಮ್ಸ್ ಸಿಬ್ಬಂದಿಗೆ ಅಗತ್ಯ ಸವಲತ್ತು ನೀಡಿ

    ರಾಯಚೂರು: ಸ್ವಾಯತ್ತ ಸಂಸ್ಥೆಯಾಗಿರುವ ರಿಮ್ಸ್ ವೈದ್ಯಕೀಯ ಆಸ್ಪತ್ರೆಯ ಕಾಯಂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಅಗತ್ಯ ಸವಲತ್ತು ಒದಗಿಸಲು ಒತ್ತಾಯಿಸಿ ಸೋಮವಾರ ಕಪ್ಪುಪಟ್ಟಿ ಧರಿಸಿ ಕೆಲಸ ನಿರ್ವಹಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.

    ಕೋವಿಡ್ ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಾಗಿದ್ದು, ಕೂಡಲೇ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ರಿಮ್ಸ್ ನಿರ್ದೇಶಕ ಡಾ.ಬಸವರಾಜ ಪೀರಾಪುರಗೆ ಮನವಿ ಸಲ್ಲಿಸಲಾಯಿತು.

    2006ರಿಂದ ಸ್ವಾಯತ್ತ ಸಂಸ್ಥೆಯಾಗಿರುವ ರಿಮ್ಸ್ ವೈದ್ಯಕೀಯ ಆಸ್ಪತ್ರೆ ಸಿಬ್ಬಂದಿಗೆ ಸರ್ಕಾರಿ ಸವಲತ್ತುಗಳನ್ನು ವಿಸ್ತರಿಸಿಲ್ಲ. ನೂತನ ಪಿಂಚಣಿ ಯೋಜನೆ, ಕೆಜಿಐಡಿ, ಜ್ಯೋತಿ ಸಂಜೀವಿನಿ ಯೋಜನೆ, ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ಭತ್ಯೆ ನೀಡುತ್ತಿಲ್ಲ. ಇತರ ಸರ್ಕಾರಿ ನೌಕರರಿಗೆ ನೀಡುವ ಯಾವ ಸೌಲಭ್ಯಗಳನ್ನೂ ಕೊಡುತ್ತಿಲ್ಲ. ನೌಕರರ ನಡುವೆ ತಾರತಮ್ಯ ತೋರಲಾಗುತ್ತಿದೆ. ಕೂಡಲೇ ಸರ್ಕಾರಿ ನೌಕರರಿಗೆ ಸಿಗುವ ಸವಲತ್ತುಗಳನ್ನು ರಿಮ್ಸ್ ಸಿಬ್ಬಂದಿಗೂ ವಿಸ್ತರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts