More

    ವರ್ತುಲ ರಸ್ತೆ ನಿರ್ಮಾಣಕ್ಕೆ ಪೂರ್ವ ಸಿದ್ಧತೆ ನಡೆಸಿ; ಅಧಿಕಾರಿಗಳಿಗೆ ಶಾಸಕ ಡಾ.ಶಿವರಾಜ ಪಾಟೀಲ್ ಸೂಚನೆ

    ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಿ


    ರಾಯಚೂರು: ನಗರದ ಹೊರವಲಯದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವರ್ತುಲ ರಸ್ತೆಗೆ ಭೂ ಸ್ವಾಧೀನ ಪ್ರಕ್ರಿಯೆ ಹಾಗೂ ಸಂಬಂಧಿಸಿದ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಪಡೆಯಲು ಪೂರ್ವ ಸಿದ್ಧತೆ ಕೈಗೊಳ್ಳುವಂತೆ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

    ಸ್ಥಳೀಯ ಸಹಾಯಕ ಆಯುಕ್ತರ ಕಚೇರಿಯಲ್ಲಿ ವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಜರುಗಿದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಬಜೆಟ್‌ನಲ್ಲಿ ವರ್ತುಲ ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದು, ಕೂಡಲೇ ಈ ಬಗ್ಗೆ ಪ್ರಕ್ರಿಯೆ ಆರಂಭಿಸುವಂತೆ ತಿಳಿಸಿದರು.

    ರಸ್ತೆ ಆಗುವ ಮಾರ್ಗದಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಮೀನು ಹಾಗೂ ರೈಲು ಮಾರ್ಗವಿದ್ದು, ಸಂಬಂಧಿಸಿದ ಇಲಾಖೆಗಳನ್ನು ಸಂಪರ್ಕಿಸಿ ಭೂ ಸ್ವಾಧೀನಕ್ಕೆ ಕ್ರಮಕೈಗೊಳ್ಳಬೇಕು. 45 ಮೀಟರ್ ರಸ್ತೆ ನಿರ್ಮಾಣಕ್ಕೆ ಬೇಕಿರುವ ಭೂಮಿ ಸ್ವಾಧೀನಕ್ಕೆ ಅಂದಾಜು ಪಟ್ಟಿ ಸಿದ್ಧಪಡಿಸಬೇಕು. ಮಟಮಾರಿ ರಾಯಚೂರು ಮಾರ್ಗ ಮಧ್ಯದಲ್ಲಿ ರೈಲ್ವೆ ಇಲಾಖೆಗೆ ಸೇರಿದ ಜಮೀನಿದ್ದು, ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು. ಮಾರ್ಗದಲ್ಲಿರುವ ಕೆರೆಗಳು, ಸಾರ್ವಜನಿಕ ಆಸ್ತಿಗಳ ಕುರಿತು ವಿವರವಾದ ಮಾಹಿತಿ ಸಂಗ್ರಹಿಸಬೇಕು. ಕೆರೆಗಳು ಯಾವ ಇಲಾಖೆ ವ್ಯಾಪ್ತಿಗೆ ಒಳಪಟ್ಟಿವೆ ಎಂಬ ಮಾಹಿತಿಯೊಂದಿಗೆ ಸಂಬಂಧಿಸಿದ ಇಲಾಖೆಗಳ ಪೂರ್ವಾನುಮತಿ ಪಡೆಯಬೇಕು. ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆ, ಸೇತುವೆಗಳ ವಿವರ ನೀಡಬೇಕು. ರಸ್ತೆ ಮಾರ್ಗದಲ್ಲಿ ಗುಡ್ಡಗಳು ಬರುತ್ತಿದ್ದು, ತೆರವಿಗೆ ಇರುವ ಅವಕಾಶಗಳ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸುವಂತೆ ಡಾ.ಶಿವರಾಜ ಪಾಟೀಲ್ ಹೇಳಿದರು.

    ಲೋಕೋಪಯೋಗಿ, ರೈಲ್ವೆ, ಕಂದಾಯ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts