ರಾಯಚೂರು: ನಗರದ ಹೊರವಲಯದ ರಾಯಚೂರು ವಿಶ್ವವಿದ್ಯಾಲಯದ ಹತ್ತಿರ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಗೋನವಾರ ಗ್ರಾಮದ ಬೇಲ್ದಾರ್ ಕೆಲಸ ಮಾಡುತ್ತಿದ್ದ ತಿಮ್ಮಾರೆಡ್ಡಿ(23) ಮೃತ. ಗೋನವಾರ ಗ್ರಾಮದಿಂದ ಯರಗೇರಾ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ರಾಯಚೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ರಾಜಹಂಸ ಸಾರಿಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಈ ಕುರಿತು ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.