More

    ರಸ್ತೆಗಿಳಿದ ಅಧಿಕಾರಿಗಳ ತಂಡ; ಮಾಸ್ಕ್ ಹಾಕದವರಿಗೆ ದಂಡ

    ರಾಯಚೂರು: ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಣೆ ಜತೆಗೆ ಮೂರು ದಿನಗಳಿಗೊಮ್ಮೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡುತ್ತಿರುವ ಸಂದರ್ಭದಲ್ಲಿ ಜನರು ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುತ್ತಿರುವುದರಿಂದ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಸೇರಿದಂತೆ ಅಧಿಕಾರಿಗಳ ತಂಡ ಗುರುವಾರ ರಸ್ತೆಗಿಳಿದು ಜನರಿಗೆ ತಿಳಿ ಹೇಳುವ ಕೆಲಸ ಮಾಡಿದರು.

    ನಗರದ ಚಂದ್ರಮೌಳೇಶ್ವರ ವೃತ್ತ, ಬಸವನಬಾವಿ ವೃತ್ತಿ, ತರಕಾರಿ ಮಾರುಕಟ್ಟೆ, ಬಟ್ಟೆ ಬಜಾರ್, ಹರಿಹರ ರಸ್ತೆ, ತೀನ್ ಕಂದೀಲ್ ಸೇರಿದಂತೆ ವಿವಿಧೆಡೆ ಜಿಲ್ಲಾಧಿಕಾರಿ ಸಂಚರಿಸಿ, ಜನರು ಗುಂಪುಗೂಡದಂತೆ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಅಂಗಡಿಗಳ ಮುಂದೆ ಖರೀದಿಗೆ ಮುಗಿ ಬಿದ್ದಿದ್ದ ಜನರಿಗೆ ಪರಸ್ಪರ ಅಂತರ ಕಾಪಾಡುವಂತೆ ಕಿವಿಮಾತು ಹೇಳುವ ಜತೆಗೆ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವಂತೆ ಸ್ಥಳದಲ್ಲಿದ್ದ ನಗರಸಭೆ ಪೌರಾಯುಕ್ತ ವೆಂಟಕಟೇಶ ಹಾಗೂ ಪೊಲೀಸರಿಗೆ ಸೂಚನೆ ನೀಡಿದರು. ತರಕಾರಿ ಮಾರಾಟಗಾರರಿಂದ ದರದ ಮಾಹಿತಿ ಪಡೆದು ಹೆಚ್ಚಿನ ದರಕ್ಕೆ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು.

    ಅಪರ ಜಿಲ್ಲಾಧಿಕಾರಿ ಕೆ.ಆರ್.ದುರಗೇಶ ಕೂಡಾ ನಗರದ ನಗರಾದ್ಯಂತ ಸಂಚರಿಸಿ, ಕೋವಿಡ್ ಮಾರ್ಗಸೂಚಿ ಪಾಲಿಸದ ಅಂಗಡಿ ಮಾಲೀಕರಿಗೆ ಹಾಗೂ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಿದರು. ಅಂಗಡಿಗಳ ಮುಂದೆ ಗ್ರಾಹಕರು ಗುಂಪುಗೂಡದಂತೆ ಕ್ರಮಕೈಗೊಳ್ಳಬೇಕು. ಇಲ್ಲವಾದರಲ್ಲಿ ಅಂಗಡಿ ಮಾಲೀಕರ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದರು. ಪ್ರಮುಖ ಮಾರುಕಟ್ಟೆ ಸ್ಥಳಗಳಿಗೆ ಹೋಗುವ ರಸ್ತೆಗಳಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಹೆಚ್ಚಿನ ದಟ್ಟಣೆ ಆಗದಂತೆ ಕ್ರಮಕೈಗೊಳ್ಳಲಾಗಿತ್ತು. ಜತೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ, ಅಗತ್ಯ ಖರೀದಿಗೆ ಬರುವವರಿಗೆ ವಿವಿಧೆಡೆ ವಾಹನ ನಿಲುಗಡೆಗೆ ಸ್ಥಳಗಳನ್ನು ಗುರುತಿಸಿ ಅವಕಾಶ ಮಾಡಿಕೊಡಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts