More

    ಶಾಲೆ, ಕಾಲೇಜು ತರಗತಿ ಆರಂಭ, ಶೇ.50ರಷ್ಟು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಜರು

    ದ್ವಿತೀಯ ಪಿಯು ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ

    ರಾಯಚೂರು: ಕರೊನಾದಿಂದಾಗಿ ಬಂದ್ ಆಗಿದ್ದ ಶಾಲೆ, ಕಾಲೇಜುಗಳನ್ನು ಶುಕ್ರವಾರದಿಂದ ಆರಂಭಿಸಲಾಗಿದ್ದು, ಮೊದಲ ದಿನ ಶೇ.50ರಷ್ಟು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಜರಾಗಿದ್ದರೆ, ಪಿಯು ದ್ವಿತೀಯ ವರ್ಷದ ವಿದ್ಯಾರ್ಥಿಗಳು ಕಡಿಮೆ ಸಂಖ್ಯೆಯಲ್ಲಿ ಬಂದಿದ್ದರು.

    ಶಾಲೆಗಳನ್ನು ತಳಿರು, ತೋರಣ ಕಟ್ಟಿ ಸಿಂಗಾರ ಮಾಡಿದ್ದು, ಬಂದ ಎಲ್ಲ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಯಿತು. ಶಿಕ್ಷಕರು ಶಾಲೆ ಮುಂಭಾಗದಲ್ಲಿ ಆಗಮಿಸಿದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು.

    ಜಿಲ್ಲೆಯ 455 ಪ್ರೌಢಶಾಲೆ ಹಾಗೂ 174 ಪಿಯು ಕಾಲೇಜುಗಳಲ್ಲಿ ತರಗತಿಗಳು ಆರಂಭವಾಗಿದ್ದು, ಕೊಠಡಿಗೆ 15 ರಿಂದ 20 ವಿದ್ಯಾರ್ಥಿಗಳಂತೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸಿರುವುದನ್ನು ಕಡ್ಡಾಯಗೊಳಿಸಲಾಗಿತ್ತು.

    ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳ ತರಗತಿ ಆರಂಭಿಸಿದ್ದು, ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಆರಂಭಿಸಿರಲಿಲ್ಲ. ಒಂದೆರಡು ದಿನಗಳಲ್ಲಿ ತರಗತಿ ಆಗಮಿಸುವುದಾಗಿ ಖಾಸಗಿ ಆಡಳಿತ ಮಂಡಳಿಗಳು ತಿಳಿಸಿವೆ.

    ಶಾಲೆ, ಕಾಲೇಜು ತರಗತಿ ಆರಂಭ, ಶೇ.50ರಷ್ಟು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಜರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts