More

    ಆತ್ಮರಕ್ಷಣೆಗಾಗಿ ಕರಾಟೆ ಕಲಿಯಿರಿ – ಡಿಸಿ ಅವಿನಾಶ ಮೆನನ್ ಸಲಹೆ

    ರಾಯಚೂರು: ಆತ್ಮರಕ್ಷಣೆಗಾಗಿ ವಿದ್ಯಾರ್ಥಿನಿಯರು ಕರಾಟೆ ಕಲಿಯಲು ಮುಂದೆ ಬರಬೇಕೆಂದು ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್ ಹೇಳಿದರು.

    ಸ್ಥಳೀಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಸ್ವಯಂ ರಕ್ಷಣೆಗಾಗಿ ಓಬವ್ವ ಆತ್ಮ ರಕ್ಷಣಾ ಕರಾಟೆ ತರಬೇತಿ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಕರಾಟೆ ಕಲಿತು ತೊಂದರೆ ನೀಡುವವರಿಗೆ ಪಾಠ ಕಲಿಸಬೇಕು. ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ಕಲೆಯನ್ನು ಕಲಿಸುವ ನಿಟ್ಟಿನಲ್ಲಿ ಸರ್ಕಾರ ಕರಾಟೆ ತರಬೇತಿ ಯೋಜನೆ ಜಾರಿಗೊಳಿಸಿದೆ. ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿನಿಯರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು ಎಂದು ಹೇಳಿದರು.

    ಎಸ್ಪಿ ಬಿ.ನಿಖಿಲ್ ಮಾತನಾಡಿ, ಕರಾಟೆ ಪುರುಷರಿಗೆ ಸೀಮಿತ ಎನ್ನುವಂತಾಗಿತ್ತು. ಯುವತಿಯರು, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕಿರಕುಳ ತಡೆಯುವ ನಿಟ್ಟಿನಲ್ಲಿ ಯುವತಿಯರಿಗೂ ಕರಾಟೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕೆ.ಎಚ್.ಬಿಲಾಲ್, ಸಮಾಜ ಕಲ್ಯಾಣ ಇಲಾಖೆ ತಾಲೂಕು ಸಹಾಯಕ ನಿರ್ದೇಶಕರಾದ ಬೇಬಿ ಹುಲ್ಸವಾರ್, ದೇವರಾಜ, ಮಹಾಲಿಂಗ, ರಾಜೇಂದ್ರಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts