More

    ಸೇವಾ ಜ್ಯೇಷ್ಠತೆ ಆಧರಿಸಿ ವೇತನ ನೀಡಲು ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ

    ರಾಯಚೂರು: ಸೇವಾ ಜ್ಯೇಷ್ಠತೆ ಆಧಾರದಲ್ಲಿ ವೇತನ ನಿಗದಿ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ನೌಕರರ ಸಂಘ ಸೋಮವಾರ ಪ್ರತಿಭಟನೆ ನಡೆಸಿತು.

    ಅಂಗನವಾಡಿ ಕೇಂದ್ರಗಳನ್ನು ಎಲ್‌ಕೆಜಿ, ಯುಕೆಜಿ ಕೇಂದ್ರಗಳನ್ನಾಗಿ ಪರಿವರ್ತಿಸಿ, ನೌಕರರಿಗೆ ಸೇವಾ ಜೇಷ್ಠತೆ ಆಧಾರದ ಮೇಲೆ ವೇತನ ಪದ್ಧತಿ ಜಾರಿಗೊಳಿಸಬೇಕು. ಐಸಿಡಿಎ ಯೋಜನೆಯಡಿ 6 ಸೇವೆಗಳಿಗೆ ಮಾತ್ರ ನೌಕರರನ್ನು ಸೀಮಿತಗೊಳಿಸಿ ಇತರ ಕೆಲಸಗಳನ್ನು ನಿರ್ಬಂಧಿಸಬೇಕು. ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಬೇಕು. ತರಬೇತಿ ನೀಡಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡಬೇಕು. ಹೆಚ್ಚುವರಿ ಸಹಾಯಕಿಯರನ್ನು ನೇಮಿಸಬೇಕು. ಮಕ್ಕಳಿಗೆ ಸಮವಸ್ತ್ರ, ಶೈಕ್ಷಣಿಕ ಪರಿಕರಗಳನ್ನು ಸಮರ್ಪಕವಾಗಿ ಪೂರೈಸಬೇಕು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಶಿಫಾರಸಿನಂತೆ ಕಾರ್ಯಕರ್ತೆಯರನ್ನು ನೌಕರರೆಂದು ಪರಿಗಣಿಸಿ ಕಾಯಂಗೊಳಿಸಬೇಕು. ಬಜೆಟ್‌ನಲ್ಲಿ ಕಡಿತಗೊಳಿಸಿರುವ 8452 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts