ಆಶ್ರಯ ಕಾಲನಿಯಲ್ಲಿ ಮೂಲಭೂತ ಸೌಲಭ್ಯ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಒತ್ತಾಯ

ರಾಯಚೂರು: ನಗರದ ಹೊಸ ಹಾಗೂ ಹಳೆಯ ಆಶ್ರಯ ಕಾಲನಿಯಲ್ಲಿ ರಸ್ತೆ, ಚರಂಡಿ, ಶೌಚಾಲಯ ಸೇರಿದಂತೆ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ನಗರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಡಿಸಿ ಕಚೇರಿ ಎದುರು ಕಚೇರಿಯ ಸ್ಥಾನಿಕ ಅಧಿಕಾರಿ ಪರಶುರಾಮ್‌ಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ವಾರ್ಡ್ ನಂ.28ರಲ್ಲಿ ಚರಂಡಿಗಳು ಇಲ್ಲದೇ ಇರುವ ಕಾರಣ ಮಳೆಯ ನೀರು ಮನೆಗಳ ಮುಂದೆಯೇ ಹರಿದುಹೋಗುತ್ತಿದೆ. ಇದರಿಂದ ವೃದ್ಧರು, ಮಕ್ಕಳು ಮತ್ತು ಅಂಗವಿಕಲರಿಗೆ ಓಡಾಡಲು ತೊಂದರೆ ಉಂಟಾಗುತ್ತಿದೆ ಕೂಡಲೇ ಚರಂಡಿ ನಿರ್ಮಾಣಕ್ಕೆ ಆಡಳಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಇದನ್ನೂ ಓದಿ: ಹೆಬ್ಬಾಲೆ ಗ್ರಾಮ ಪಂಚಾಯಿತಿಗೆ ಮೂಲ ಸೌಕರ್ಯ ಕಲ್ಪಿಸಿ

ಮಳೆಯ ನೀರು ರಸ್ತೆಯ ಮೇಲೆ ಹರಿಯುವುದರಿಂದ ಅಪಘಾತಗಳು ಮತ್ತು ನಿಂತ ನೀರಿನಿಂದ ಸೊಳ್ಳೆಗಳು ಹೆಚ್ಚಾಗಿ ಖಾಯಿಲೆಯ ಭೀತಿಯೂ ಉಂಟಾಗಿದೆ. ಕೂಡಲೇ ರಸ್ತೆ ನಿರ್ಮಾಣ, ಶೌಚಾಲಯ ನಿರ್ಮಾಣ, ಬೀದಿ ದೀಪ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ಹನುಮಂತ, ಜಲಾಲ್, ಶೇಖ್ ಅಲಿ, ಅನ್ವರ್, ಅಲ್ಲಾವುದ್ದಿನ್, ಹುಸೇನ್, ಸರ್ತಾಜ್, ಅಲ್ತಾಫ್, ಬಾಬ, ಶಾಲಂ ಸೇರಿದಂತೆ ಇತರರಿದ್ದರು.

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…