More

    ತಂತ್ರಾಂಶದಲ್ಲಿ ಜನನ, ಮರಣ ನೋಂದಯಿಸಲು ಅಧಿಕಾರಿಗಳಿಗೆ ಡಿಸಿ ಡಾ.ಬಿ.ಸಿ.ಸತೀಶ ಸೂಚನೆ

    ರಾಯಚೂರು: ಜನನ ಮತ್ತು ಮರಣ ಸಂಭವಿಸಿದ 21 ದಿನದೊಳಗೆ ಇ ಜನ್ಮ ತಂತ್ರಾಂಶದಲ್ಲಿ ನೋಂದಣಿ ಮಾಡುವುದು ಕಡ್ಡಾಯವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ನಿರ್ಲಕ್ಷೃ ವಹಿಸದೇ ನೋಂದಣಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದರು.

    ಡಿಸಿ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ನಾಗರಿಕ ನೋಂದಣಿ ಅಧಿನಿಯಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಉಚಿತವಾಗಿ ಸಾರ್ವಜನಿಕರಿಗೆ ನೀಡಲು ಕ್ರಮಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ಜನನ ಮತ್ತು ಮರಣ ಪ್ರಮಾಣಪತ್ರಗಳನ್ನು ಹೊಸ ಸಾಫ್ಟ್‌ವೇರ್‌ಗೆ ಅಪ್‌ಲೋಡ್ ಮಾಡಬೇಕು. ನೋಂದಣಿ ಸಮಯದಲ್ಲಿ ಹೆಸರು, ದಿನಾಂಕ, ವಯಸ್ಸು, ವಿಳಾಸ ಸೇರಿ ಅಗತ್ಯ ಮಾಹಿತಿಗಳನ್ನು ದಾಖಲಿಸುವಾಗ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಬೇಕು ಎಂದರು.

    ತಹಸೀಲ್ದಾರರು ಪ್ರತಿ ತಿಂಗಳು ತಾಲೂಕು ಮಟ್ಟದ ಸಭೆ ನಡೆಸಿ ನೋಂದಣಿ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ನೋಂದಣಿಗೆ ಕಂಪ್ಯೂಟರ್ ಆಪರೇಟರ್ ಕೊರತೆಯಿದ್ದರೆ ಕೂಡಲೇ ನೇಮಕ ಮಾಡಿಕೊಳ್ಳಬೇಕು. ಲಿಂಗಸುಗೂರು ತಾಲೂಕಿನಲ್ಲಿ ಐವರು ಮಕ್ಕಳು ಕೋವಿಡ್‌ನಿಂದ ಮೃತಪಟ್ಟಿರುವ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು ಎಂದರು.

    ಅಪರ ಜಿಲ್ಲಾಧಿಕಾರಿ ಕೆ.ಆರ್.ದುರಗೇಶ ಮಾತನಾಡಿ, ಸಿಂಧನೂರು, ರಾಯಚೂರು ನಗರಸಭೆ ಮತ್ತು ದೇವದುರ್ಗ ಪುರಸಭೆಯಲ್ಲಿ ನೋಂದಣಿ ಕಾರ್ಯ ಬಾಕಿಯಿದ್ದು, ಸಂಬಂಧಿಸಿದ ಅಧಿಕಾರಿಗಳು ಕೂಡಲೇ ನೋಂದಣಿ ಕಾರ್ಯ ಪೂರ್ಣಗೊಳಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.

    ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ತಿಮ್ಮಪ್ಪ, ತಹಸೀಲ್ದಾರ್ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಯೋಜನಾ ಕೋಶದ ಯೋಜನಾಧಿಕಾರಿ ಮಹೇಂದ್ರ ಕುಮಾರ, ಡಿಎಚ್‌ಒ ರಾಮಕೃಷ್ಣ, ಜಿಲ್ಲಾ ಶಸ್ತ್ರಚಿಕಿತ್ಸ ಡಾ.ಎನ್.ವಿಜಯಶಂಕರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts