More

    179 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ, 30 ಸಾವಿರ ವಿದ್ಯಾರ್ಥಿಗಳ ನೋಂದಣಿ

    ಕೋವಿಡ್ ನಿಯಮ ಪಾಲನೆಗೆ ಒತ್ತು | ಮಾಸ್ಕ್ ಧರಿಸುವಂತೆ ಸೂಚನೆ

    ರಾಯಚೂರು: ಜಿಲ್ಲೆಯ 179 ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, 30,472 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಕೋವಿಡ್ ಮಾರ್ಗಸೂಚಿಯಂತೆ ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ಮಾಡಲಾಗಿದೆ.

    ಎಲ್ಲ ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡವರಿಗೆ ಲಸಿಕೆ ಹಾಕಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್ ನಡೆಸಿ ವಿದ್ಯಾರ್ಥಿಗಳನ್ನು ಕೇಂದ್ರದ ಒಳಗೆ ಬಿಡಲಾಗುತ್ತದೆ. ಕೋವಿಡ್ ಹಿನ್ನೆಲೆಯಲ್ಲಿ ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಇರಿಸುವ ವ್ಯವಸ್ಥೆ ಮಾಡಲಾಗಿದೆ. ಒಟ್ಟು 2,644 ಕೊಠಡಿಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳಿಗೆ ವಿತರಿಸಲು ಮಾಸ್ಕ್‌ಗಳನ್ನು ಕೇಂದ್ರಗಳಿಗೆ ನೀಡಲಾಗಿದೆ.

    ದೇವದುರ್ಗ ತಾಲೂಕಿನಲ್ಲಿ 26 ಕೇಂದ್ರಗಳಿದ್ದು, 373 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 3,763 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ. ಲಿಂಗಸುಗೂರು ತಾಲೂಕಿನಲ್ಲಿ 27 ಕೇಂದ್ರಗಳ 540 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದ್ದು, 5,936 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾನ್ವಿ ತಾಲೂಕಿನಲ್ಲಿ 31 ಕೇಂದ್ರಗಳ 456 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದ್ದು, 5,470 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಯಚೂರು ತಾಲೂಕಿನಲ್ಲಿ 60 ಕೇಂದ್ರಗಳ 801 ಕೊಠಡಿಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, 9,617 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಸಿಂಧನೂರು ತಾಲೂಕಿನಲ್ಲಿ 35 ಕೇಂದ್ರಗಳ 474 ಕೊಠಡಿಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, 5,686 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪರೀಕ್ಷೆ ಬರೆಯಲಿರುವ ಒಟ್ಟು 38,472 ವಿದ್ಯಾರ್ಥಿಗಳಲ್ಲಿ 2,524 ವಿದ್ಯಾರ್ಥಿಗಳು ರಿಪಿಟರ್ಸ್‌ಗಳಾಗಿದ್ದು, 1,695 ವಿದ್ಯಾರ್ಥಿಗಳು ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ.

    ಕೇಂದ್ರ ಸುತ್ತಮುತ್ತ ನಿಷೇಧಾಜ್ಞೆ : ಜಿಲ್ಲೆಯಲ್ಲಿ ಸೋಮವಾರ ಮತ್ತು ಜು.22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ನೇಮಕಗೊಂಡಿರುವ ಸಿಬ್ಬಂದಿ ಹೊರತುಪಡಿಸಿ ಇತರರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಕೇಂದ್ರದ 100 ಮೀಟರ್ ಸುತ್ತಮುತ್ತ ಇರುವ ಜೆರಾಕ್ಸ್, ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts