More

    ಸುಪ್ರೀಂ ಕೋರ್ಟ್ ಆದೇಶ ಪಾಲಿಸದ ಆಯೋಗ

    ರಾಯಚೂರು, ಸುಪ್ರೀಂ ಕೋರ್ಟ್ ಆದೇಶ, ಪರಿಶಿಷ್ಟ ಜಾತಿ ಪಟ್ಟಿ, ನ್ಯಾಯಾಂಗ ನಿಂದನೆ ಪ್ರಕರಣ, ಒಕ್ಕೂಟದ ಅಧ್ಯಕ್ಷ ಮಹೇಂದ್ರಕುಮಾರ ಮಿತ್ರ,
    Raichur, Supreme Court Order, Scheduled Caste List, Contempt of Court Case, Union President Mahendra Kumar Mitra,
    ರಾಯಚೂರು: ಲಂಬಾಣಿ, ಭೋವಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಸುಪ್ರೀಂ ಕೋರ್ಟ್ ನೀಡಿದ ಸೂಚನೆಯನ್ನು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ ಪಾಲಿಸಿಲ್ಲ. ಈ ಹಿನ್ನೆಲೆಯಲ್ಲಿ ಆಯೋಗದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಡಾ.ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ಅಧ್ಯಕ್ಷ ಮಹೇಂದ್ರಕುಮಾರ ಮಿತ್ರ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದರು. ನಾಲ್ಕು ಜಾತಿಗಳನ್ನು ಅಸಂವಿಧಾನಿಕವಾಗಿ ಎಸ್ಸಿ ಪಟ್ಟಿಗೆ ಸೇರಿಸಲಾಗಿದ್ದು, ಸುಪ್ರೀಂ ಕೋರ್ಟ್ ಆದೇಶವನ್ನು ಜಾರಿಗೊಳಿಸಲು ಆಯೋಗ ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು. 2019ರಲ್ಲಿ ಲಂಬಾಣಿ, ಭೋವಿ,ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈ ಬಿಡುವಂತೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನಾರಿಮನ್ ಹಾಗೂ ರವೀಂದ್ರ ಭಟ್ ಪೀಠ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಅರ್ಜಿ ಸಲ್ಲಿಸಲು ಸೂಚಿಸಿತ್ತು.

    ರಾಜ್ಯದ ಮುಖ್ಯಕಾರ್ಯದರ್ಶಿ ರಾಷ್ಟ್ರೀಯ ಎಸ್ಸಿ ಆಯೋಗಕ್ಕೆ ಪತ್ರ ಬರೆದು ಸುಪ್ರಿಂಕೋರ್ಟ್ ಆದೇಶ ಜಾರಿ ಮಾಡಲು ಬರುವುದಿಲ್ಲ ಎಂದು ಪತ್ರ ಬರೆದಿರುವುದು ನ್ಯಾಯಾಂಗ ನಿಂದನೆಯಾಗುತ್ತದೆ. ರಾಜ್ಯ ಸರ್ಕಾರ ಮೀಸಲಾತಿ ವರ್ಗೀಕರಣ ಮಾಡಿರುವುದು ಸಂವಿಧಾನ ಬದ್ದವಾಗಿಲ್ಲ. ವಡ್ಡರು, ಲಂಬಾಣಿ ಸಮುದಾಯಗಳು ನೂರು ವರ್ಷಗಳಿಂದ ಎಸ್ಸಿ ಪಟ್ಟಿಯಲ್ಲಿರುವದಾಗಿ ಸರ್ಕಾರ ತಪ್ಪು ಮಾಹಿತಿ ನೀಡಿದೆ. ಸಿಕ್ಕಿಂ ರಾಜ್ಯದಲ್ಲಿ 1978 ರಲ್ಲಿ ಗೋರ್ಖಾ ಸಮುದಾಯವನ್ನು ಎಸ್ಸಿ ಪಟ್ಟಿಗೆ ಸೇರಿಸಿರುವುದನ್ನು ರದ್ದುಪಡಿಸಲಾಗಿದೆ.

    ಒಳ ಮೀಸಲಾತಿ ಜಾರಿಯಾಗಬೇಕಾದರೆ ಕಲಂ 341(3) ತಿದ್ದುಪಡಿ ತರಬೇಕಿದೆ. ಸದಾಶಿವ ಆಯೋಗ ವರದಿ ಜಾರಿಗೊಂಡರೆ ಸಂವಿಧಾನದ 14 ನೇ ಕಲಂ ರದ್ದುಗೊಂಡಂತಾಗುತ್ತದೆ. ಸರ್ಕಾರ ಚುನಾವಣೆ ದೃಷ್ಟಿಯಿಂದ ಮೀಸಲಾತಿ ಹೆಸರಿನಲ್ಲಿ ತೆಗೆದುಕೊಂಡಿರುವ ನಿರ್ಧಾರದಿಂದ ಶೋಷಿತ ಸಮುದಾಯಗಳಿಗೆ ಅನ್ಯಾಯವಾಗಲಿದೆ ಎಂದು ಮಹೇಂದ್ರಕುಮಾರ ಮಿತ್ರ ಹೇಳಿದರು. ಒಕ್ಕೂಟದ ಜಿಲ್ಲಾಧ್ಯಕ್ಷ ಕಮಲ್ ಆಂಜನೇಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts