More

    ಸ್ವಾವಲಂಬಿ ಕರ್ನಾಟಕ ನಿರ್ಮಾಣವಾಗಲಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಆಶಯ

    ರಾಯಚೂರು: ಕನ್ನಡ ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವುದರ ಜತೆಗೆ ಸ್ವಾವಲಂಬಿ ಕರ್ನಾಟಕ ನಿರ್ಮಾಣಕ್ಕೆ ಎಲ್ಲರೂ ಪಣ ತೊಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು.

    ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ನಿಮಿತ್ತ ಮಂಗಳವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಕನ್ನಡದ ಮೇಲೆ ಇಂಗ್ಲಿಷ್ ಸೇರಿ ಅನೇಕ ಭಾಷೆಗಳ ದಾಳಿ ಆಗುತ್ತಿದೆ. ಯುವ ಜನಾಂಗದಲ್ಲಿ ಕನ್ನಡದ ಬಗ್ಗೆ ಪ್ರೀತಿ ಮೂಡುವಂತೆ ಮಾಡಬೇಕು ಎಂದರು.

    ಕನ್ನಡ ನಾಡಿನ ಇತಿಹಾಸ, ಪರಂಪರೆ, ಸಾಂಸ್ಕೃತಿಕ ಹಿರಿಮೆ ವೈಶಿಷ್ಟೃತೆಗಳಿಂದ ಕೂಡಿದೆ. ಭಾವೈಕ್ಯತೆ ಸ್ವರ್ಗವಾಗಿರುವ ಕರ್ನಾಟಕದಲ್ಲಿ ಎಲ್ಲರೂ ಸಾಮರಸ್ಯದಿಂದ ಬದುಕುತ್ತಿದ್ದು, ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ಬಂದಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

    ರಾಜ್ಯೋತ್ಸವವನ್ನು ಸರ್ಕಾರ ಈ ಬಾರಿ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ನನ್ನ ನಾಡು ನನ್ನ ಹಾಡು ಅಭಿಯಾನ, ಕೋಟಿ ಕಂಠ ಗಾಯನ ಅಭಿಯಾನಗಳನ್ನು ನಡೆಸಲಾಗಿದೆ. ಕನ್ನಡ ಸಂಸ್ಕೃತಿ ಬಿಂಬಿಸುವ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts