ಚಲಿಸುತ್ತಿದ್ದ ರೈಲಿನಲ್ಲಿ ನೇಣಿಗೆ ಶರಣಾದ ಅಪರಿಚಿತ ವ್ಯಕ್ತಿ

ರಾಯಚೂರು: ಚಲಿಸುತ್ತಿದ್ದ ರೈಲಿನಲ್ಲಿ ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಸೋಮವಾರ ಸಂಜೆ ಗುಂತಕಲ್​ನಿಂದ ರಾಯಚೂರಿಗೆ ಬಂದ ಪ್ಯಾಸೆಂಜರ್ ರೈಲಿನಲ್ಲಿ ಘಟನೆ ನಡೆದಿದೆ. ರೈಲಿನ ಬೋಗಿಯ ಫ್ಯಾನಿಗೆ ಟವಲ್ ಕಟ್ಟಿಕೊಂಡು ನೇಣಿಗೆ ಶರಣಾಗಿದ್ದು, ಮೃತನ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಬೋಗಿಯಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ. ಇಂದು ಬೆಳಗ್ಗೆ ಪ್ಲಾಟ್ ಫಾರಂನಲ್ಲಿ ರೈಲು ನಿಲ್ಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮಾಡಲಾಗುತ್ತಿದೆ. (ದಿಗ್ವಿಜಯ ನ್ಯೂಸ್​)