ರಾಯಚೂರು ವಿವಿ ನೇಮಕಾತಿ: ಅಂಕ ಪಟ್ಟಿ ರವಾನೆ

blank

ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ನ.24ರಂದು ಪರೀಕ್ಷೆ ನಡೆದಿದ್ದು, ಅದಾದ 19 ದಿನಗಳಲ್ಲೇ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದಕ್ಕೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮ ಅಂಕಪಟ್ಟಿ ಪ್ರಕಟಿಸಿದ್ದು, ಅದನ್ನು ವಿಶ್ವವಿದ್ಯಾಲಯಕ್ಕೆ ರವಾನಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಒಟ್ಟು 16 ವಿಷಯಗಳ 24 ಹುದ್ದೆಗಳಿಗೆ ಒಟ್ಟು 1,175 ಮಂದಿ ಪರೀಕ್ಷೆ ಬರೆದಿದ್ದರು. ಅಂತಿಮ ಅಂಕಪಟ್ಟಿಯ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ವಿಶ್ವವಿದ್ಯಾಲಯವೇ ಮಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…