ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ

ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ರಾಯಚೂರು: ಮೃತರ ಕುಟುಂಬಕ್ಕೆ ಸಾಂತ್ವ್ವನ ಹೇಳಲು ಹೋಗುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸ್ಥಳೀಯ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಉತ್ತರಪ್ರದೇಶದ ಸೋನ್ ಭದ್ರದಲ್ಲಿ ಗುಂಡಿನ ದಾಳಿಗೆ ಒಳಗಾಗಿ ಮೃತಪಟ್ಟ ಹತ್ತು ಮಂದಿಯ ಕುಟುಂಬದವರನ್ನು ಭೇಟಿಯಾಗಲು ಹೊರಟಾಗ ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ವಿನಾಕಾರಣ ಬಂಧಿಸುವ ಮೂಲಕ ದೌರ್ಜನ್ಯ ನಡೆಸಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದ್ದ ಗ್ರಾಮದ ಮುಖ್ಯಸ್ಥ ಹಾಗೂ ಗೊಂಡ ಬುಡಕಟ್ಟು ಜನರ ಮಧ್ಯೆ ಮಾರಾಮಾರಿ ನಡೆಸಿದ್ದು, ಮುಖ್ಯಸ್ಥನ ಕಡೆಯವರು ಗುಂಡಿನ ದಾಳಿ ನಡೆಸಿದ್ದರಿಂದ 10 ಮಂದಿ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ.

ಪ್ರಿಯಾಂಕಾ ಗಾಂಧಿಯನ್ನು ಬಂಧಿಸುವ ಮೂಲಕ ಕೇಂದ್ರ ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದರು.


ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಣ್ಣ ಇರಬಗೇರಾ, ಮುಖಂಡರಾದ ಕೆ.ಶಾಂತಪ್ಪ, ಜಯಣ್ಣ, ಜಿ.ಬಸವರಾಜ ರೆಡ್ಡಿ, ತಾಯಣ್ಣ ನಾಯಕ, ಅಬ್ದುಲ್ ಕರೀಂ, ಅಮರೇಗೌಡ ಹಂಚಿನಾಳ, ನಿರ್ಮಲಾ ಬೆಣ್ಣಿ, ಶಶಿಕಲಾ ಭೀಮರಾಯ ಇತರರಿದ್ದರು.

One Reply to “ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ”

Leave a Reply

Your email address will not be published. Required fields are marked *