More

    ಒಂದೇ ದಿನ 25 ಸಾವಿರ ಜನರಿಗೆ ವ್ಯಾಕ್ಸಿನ್ ನೀಡುವ ಗುರಿ ಹೊಂದಲಾಗಿದೆ ಎಂದ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ

    ರಾಯಚೂರು: ಜಿಲ್ಲಾದ್ಯಂತ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಒಂದೇ ದಿನ 25 ಜನರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.

    ಸ್ಥಳೀಯ ರಿಮ್ಸ್ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲರೂ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಂದೆ ಬರಬೇಕು. ಅದರಲ್ಲೂ ಆದ್ಯತಾ ವಲಯದವರಿಗೆ ಲಸಿಕೆ ಹಾಕಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

    ಜಿಲ್ಲೆಯ ಪ್ರತಿ ಗ್ರಾಪಂ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಕರೊನಾ ಚುಚ್ಚುಮದ್ದು ನೀಡಲಾಗುತ್ತಿದೆ. ಈಗಾಗಲೇ 45 ವರ್ಷ ಮೇಲ್ಪಟ್ಟವರಿಗೆ ಎರಡೂ ಡೋಸ್ ನೀಡಲಾಗಿದೆ. ಅಭಿಯಾನದ ಮೂಲಕ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ಹಾಕುವ ಮೂಲಕ ವೈರಸ್ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ ಎಂದರು.

    ಲಸಿಕೆ ಹಾಕಿಸಿಕೊಂಡವರಲ್ಲಿ ಸೋಂಕು ಕಂಡು ಬಂದರೂ ಯಾರೂ ಇದುವರೆಗೂ ಆಸ್ಪತ್ರೆಗೆ ದಾಖಲಾಗಿಲ್ಲ. ವ್ಯಾಕ್ಸಿನ್ ಪಡೆಯದ ಸೋಂಕಿತರು ಹಾಸ್ಪಿಟಲ್‌ಗೆ ದಾಖಲಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಶೇ.51ರಷ್ಟು ಜನರು ಲಸಿಕೆ ಪಡೆದಿದ್ದಾರೆ. ಇದನ್ನು ಎಲ್ಲರೂ ಪಡೆಯುವ ಮೂಲಕ ಆರೋಗ್ಯ ರಕ್ಷಣೆಗೆ ಮಾಡಿಕೊಳ್ಳಬೇಕೆಂದು ಆರ್.ವೆಂಕಟೇಶಕುಮಾರ ಹೇಳಿದರು.

    ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಡಿಎಚ್‌ಒ ಡಾ. ರಾಮಕೃಷ್ಣ, ರಿಮ್ಸ್ ನಿರ್ದೇಶಕ ಡಾ. ಬಸವರಾಜ ಪೀರಾಪುರೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ವಿಜಯಶಂಕರ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts