More

    ವಿಜಯನಗರ ಕಾಲುವೆಗಳನ್ನು ದುರಸ್ತಿಗೊಳಿಸಿ

    ರಾಯಚೂರು: ಜಿಲ್ಲೆಯಲ್ಲಿ ವಿಜಯನಗರ ಅರಸರ ಕಾಲದಲ್ಲಿ ತುಂಗಭದ್ರಾ ನದಿಯಿಂದ ರೈತರ ಜಮೀನುಗಳಿಗೆ ನೀರು ಒದಗಿಸಲು ನಿರ್ಮಿಸಲಾಗಿದ್ದ ವಿಜಯನಗರ ಕಾಲುವೆಗಳನ್ನು ದುರಸ್ತಿಗೊಳಿಸುವಂತೆ ಒತ್ತಾಯಿಸಿ ತಾಲೂಕಿನ ಗಿಲ್ಲೆಸುಗೂರು ಗ್ರಾಮದ ನೀರಾವರಿ ಇಲಾಖೆ ಕಚೇರಿ ಮುಂದೆ ರಾಜ್ಯ ರೈತ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

    ವಿಜಯನಗರ ಕಾಲುವೆ ಆಧುನೀಕರಣಕ್ಕಾಗಿ ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನಿಂದ 432 ಕೋಟಿ ರೂ. ಸಾಲ ಪಡೆದು 371 ಕೋಟಿ ರೂ.ಗಳ ಟೆಂಡರ್ ಕರೆದು 2019ರಲ್ಲಿ ಆರ್‌ಎನ್‌ಎಸ್ ಇನ್ಫ್ರಾ ಸಂಸ್ಥೆಗೆ ಗುತ್ತಿಗೆ ನೀಡಲಾಗಿತ್ತು. 30 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕಾಗಿತ್ತು. ಆದರೆ ಇನ್ನೂ ಬಹುಪಾಲು ಕಾಮಗಾರಿ ಪೂರ್ಣಗೊಂಡಿಲ್ಲ. ಕಾಮಗಾರಿಯಲ್ಲಿ ಅನೇಕ ಲೋಪದೋಷಗಳಿದ್ದು, ಸರಿಪಡಿಸದಿದ್ದರೆ ರೈತರ ಜಮೀನುಗಳಿಗೆ ನೀರು ಹರಿಯುವುದಿಲ್ಲ. ಜೂಕೂರ್‌ನಿಂದ ನದಿಗಡ್ಡೆಗೆ ಹೋಗುವ ಸೇತುವೆ ಏರಿಗೆ ಕಳಪೆ ಮರಂ ಉಪಯೋಗಿಸಲಾಗಿದ್ದು, ಇದರಿಂದ ಕೋಟಿಗಟ್ಟಲೆ ಹಣ ಹೆಚ್ಚುವರಿಯಾಗಿ ಬಿಲ್ ಎತ್ತಲಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಸಂಸ್ಥೆಯಿಂದ ಹಣ ಮರಳಿ ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    ರೈತರು ಪ್ರತಿಭಟನೆ ನಡೆಸುತ್ತಿದ್ದರೂ ನೀರಾವರಿ ಇಲಾಖೆ ಅಧಿಕಾರಿಗಳು ಆಗಮಿಸಿ ಮನವಿ ಸ್ವೀಕರಿಸದಿರುವುದರಿಂದ ಪ್ರತಿಭಟನೆಯನ್ನು ಮುಂದುವರಿಸಲಾಗಿದೆ. ಪ್ರತಿಭಟನೆಯಲ್ಲಿ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಪದಾಧಿಕಾರಿಗಳಾದ ಅಬ್ದುಲ್ ಮಜೀದ್, ಪ್ರಭಾಕರ ಪಾಟೀಲ್, ದೇವರಾಜ, ಬೂದಯ್ಯಸ್ವಾಮಿ, ಮಲ್ಲಣ್ಣ ದಿನ್ನಿ, ದೇವರಾಜ, ನರಸಿಂಹ, ಗಂಗಪ್ಪ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts