More

    ಗ್ರಾಮಗಳ ಮೂಲಕ ದೇಶದ ಅಭಿವೃದ್ಧಿ ಸಾಧ್ಯ, ಸಂಸದ ರಾಜಾ ಅಮರೇಶ್ವರ ನಾಯಕ ಅಭಿಮತ

    ರಾಯಚೂರು: ಗ್ರಾಮಗಳು ಅಭಿವೃದ್ಧಿ ಹೊಂದಿದರೆ ಜಿಲ್ಲೆ ಹಾಗೂ ದೇಶ ಅಭಿವೃದ್ಧಿ ಹೊಂದುತ್ತದೆ. ಆದ್ದರಿಂದ ಗ್ರಾಪಂಮಟ್ಟದಿಂದ ಅಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವಂತೆ ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ದೂರದೃಷ್ಟಿ ಯೋಜನೆಗೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಭಾರತದ ಅಭಿವೃದ್ಧಿ ವ್ಯವಸ್ಥೆ ಪಂಚಾಯತ್‌ನಿಂದ ಪಾರ‌್ಲಿಮೆಂಟ್‌ವರೆಗಿನ ವ್ಯವಸ್ಥೆಯಾಗಿದ್ದು, ಮೂಲಭೂತವಾಗಿ ಗ್ರಾಮಗಳಿಂದ ಅಭಿವೃದ್ಧಿ ಪ್ರಾರಂಭವಾದರೆ ದೇಶದ ಅಭಿವೃದ್ಧಿಯನ್ನೂ ಕಾಣಬಹುದಾಗಿದೆ. ಆದ್ದರಿಂದ ಗ್ರಾಮಗಳಲ್ಲಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಒಟ್ಟಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.

    ದೂರದೃಷ್ಟಿ ಯೋಜನೆಯು ಸರ್ಕಾರದ ಮಹತ್ತರ ಯೋಜನೆಗಳಲ್ಲೊಂದಾಗಿದ್ದು, ಮುಂದಿನ 5 ವರ್ಷಗಳಲ್ಲಿ ಗ್ರಾಮಗಳ ಅಭಿವೃದ್ಧಿಗೆ ಯಾವ ರೀತಿಯ ಯೋಜನೆಗಳನ್ನು ಸಿದ್ದಪಡಿಸಿಕೊಳ್ಳಬೇಕು ಎಂಬುವುದರ ಕುರಿತು ಅರಿತುಕೊಳ್ಳುವ ಕಾರ್ಯಕ್ರಮವಾಗಿದೆ. ಈ ಯೋಜನೆಯಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಪಂಚಾಯತ್ ಮಟ್ಟದಿಂದ ಅನುಷ್ಠಾನಗೊಳಸಬೇಕು. ಗುರಿಯಿಲ್ಲದೇ ಯಶಸ್ಸು ಕಾಣಲು ಸಾಧ್ಯವಿಲ್ಲ ಆದ್ದರಿಂದ ಅಭಿವೃದ್ಧಿಗೆ ಆಯಾ ಗ್ರಾಪಂಗಳಲ್ಲಿ ಗುರಿಯನ್ನು ಹೊಂದಿ ಪ್ರಗತಿ ಸಾಧಿಸಬೇಕು ಎಂದು ಸಲಹೆ ನೀಡಿದರು.

    ಈ ಹಿಂದೆ ಗ್ರಾಪಂಗಳಿಗೆ ಹೆಚ್ಚಿನ ಅನುದಾನ ಇರಲಿಲ್ಲ. ಆದರೆ ಇದೀಗ ಗ್ರಾಪಂಗಳಿಗೆ ಹೆಚ್ಚಿನ ಅನುದಾನ ಸಿಗುತ್ತಿದ್ದು, ಆದ್ಯತೆ ಅನುಸಾರ ಅನುದಾನ ಬಳಕೆ ಮಾಡಿಕೊಂಡು ಪಂಚಾಯತಿ ಮಟ್ಟದಲ್ಲಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

    ದೇಶದಾದ್ಯಂತ 3,700 ಹಳ್ಳಿಗಳನ್ನು ಆದಿ ಆದರ್ಶ ಗ್ರಾಮ ಎಂದು ಘೋಷಿಸಲಾಗಿದ್ದು, ಅದರಲ್ಲಿ ಜಿಲ್ಲೆಯ 89 ಹಳ್ಳಿಗಳು ಆಯ್ಕೆಯಾಗಿವೆ. ಆದಿ ಆದರ್ಶ ಗ್ರಾಮ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿಗೆ 25 ಲಕ್ಷ ರೂ.ಅನುದಾನ ನೀಡಲಾಗುತ್ತಿದೆ ಎಂದು ಹೇಳಿದರು.

    ಇದಕ್ಕೂ ಮೊದಲು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಡಾ.ಟಿ.ರೋಣಿ ಮಾತನಾಡಿ, ದೂರದೃಷ್ಟಿ ಯೋಜನೆಯು ಗ್ರಾಮಗಳ ಅಭಿವೃದ್ಧಿ ಯಾವ ಸ್ಥಿತಿಯಲ್ಲಿವೆ ಯಾವ ಸ್ಥಿತಿಗೆ ಹೇಗೆ ತೆಗೆದುಕೋಂಡು ಹೋಗಬೇಕು? ಎನ್ನುವ ಅಂಶಗಳನ್ನು ಒಳಗೊಂಡಿದ್ದು, ಸರ್ಕಾರದ ಯೋಜನೆಗಳನ್ನು ಗ್ರಾಮಗಳಿಗೆ ಮುಟ್ಟಿಸಬೇಕಾಗಿದೆ ಎಂದರು.

    ಮೊದಲೆಲ್ಲ ಗ್ರಾಮ ಪಂಚಾಯತಿಗಳು ಅಭಿವೃದ್ಧಿ ಹಾಗೂ ಆದಾಯದ ಅಂಶಗಳನ್ನೊಳಗೊಂಡು ಕಾರ್ಯ ನಿರ್ವಹಿಸುತ್ತಿದ್ದವು, ಆದರೆ ಪ್ರಸ್ತುತ ಸುಸ್ತಿರ ಅಭಿವೃದ್ಧಿಗಳತ್ತಾ ಗ್ರಾಪಂಗಳು ಸಾಗುತ್ತಿವೆ. ಈ ನಿಟ್ಟಿನಲ್ಲಿ ಹತ್ತು ಅಂಶಗಳ ಯೋಜನೆ ಕಾರ್ಯರೂಪಕ್ಕೆ ತರಬೇಕಾದೆ ಎಂದರು. ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶಶಿಧರ ಕುರೇರ, ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಮಲ್ಲಟ ಗ್ರಾಪಂ ಅಧ್ಯಕ್ಷೆ ಲಕ್ಷ್ಮಿ ಸೇರಿ ವಿವಿಧ ಗ್ರಾಪಂ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts