More

    ಸ್ವಯಂಪ್ರೇರಿತ ದೂರು ದಾಖಲಿಸಿ ವಿಚಾರಣೆ- ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಮಾಹಿತಿ

    ರಾಯಚೂರು: ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದ್ದು, ಸ್ವಯಂ ಪ್ರೇರಿತವಾಗಿ 96 ದೂರು ದಾಖಲಿಸಿಕೊಂಡು ಕ್ರಮಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ತಿಳಿಸಿದರು.

    ಜಲ ನಿರ್ಮಲ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದರು. ಮಾಧ್ಯಮಗಳ ವರದಿ ಆಧಾರಿಸಿ ಹಾಗೂ ಗಮನಕ್ಕೆ ಬಂದ ಪ್ರಕರಣಗಳನ್ನು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದರು.

    ಆಯೋಗದ ಅಧ್ಯಕ್ಷನಾಗಿ ಮೂರು ತಿಂಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ದಾಖಲಾಗಿರುವ ಪ್ರಕರಣಗಳ ಶೀಘ್ರ ಇತ್ಯರ್ಥಗೊಳಿಸಿ ನೊಂದವರಿಗೆ ನ್ಯಾಯ ನೀಡುವ ಕೆಲಸ ಮಾಡಲಾಗುವುದು ಎಂದರು.

    ಸರ್ಕಾರದ 24 ಇಲಾಖೆಗಳನ್ನು ಒಳಗೊಂಡು ಮಕ್ಕಳ ರಕ್ಷಣೆಗೆ ಕ್ರಮಕೈಗೊಳ್ಳಲಾಗುತ್ತಿದೆ. ದೇವದಾಸಿ ಮತ್ತು ಎಚ್‌ಐವಿ ಪೀಡಿತ ಮಕ್ಕಳು ಹಾಗೂ ಬಾಲ ಕಾರ್ಮಿಕರ ಸೇರಿ ಎಲ್ಲರ ಮಕ್ಕಳ ಹಕ್ಕುಗಳ ರಕ್ಷಣೆಗೆ ಕಟಿಬದ್ಧರಾಗಿದ್ದೇವೆ. ಬಾಲ್ಯ ವಿವಾಹ ತಡೆಗೆ ಹೆಚ್ಚಿನ ಒತ್ತನ್ನು ನೀಡಲಾಗಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts