

IT Raid: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದ್ದು, ಇಂದು (ಸೆ. 24) ಬೆಂಗಳೂರಿನ ನಗರದ ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಬೆಳ್ಳಂ ಬೆಳಗ್ಗೆ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಹಲವು ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ಏಕಕಾಲಕ್ಕೆ 200ಕ್ಕೂ ಅಧಿಕ ಅಧಿಕಾರಿಗಳು ದಾಳಿ ಮಾಡಿ, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಆದಾಯ ಮೀರಿದ ಆಸ್ತಿ ಗಳಿಕೆ ಮತ್ತು ತೆರಿಗೆ ವಂಚನೆ ಆರೋಪ ಹಿನ್ನೆಲೆ ದಾಳಿ ನಡೆದಿದೆ.
ಬೆಂಗಳೂರಿನ ಬನಶಂಕರಿ, ಹೊಸಕೇರಹಳ್ಳಿ ಸೇರಿ ವಿವಿಧೆಡೆ ಇರುವ ಕಾಲೇಜುಗಳು ಮೇಲೆ ದಾಳಿ ನಡೆದಿದೆ. ಹಾಗೆಯೇ ಆಂಧ್ರದ ಕುಪ್ಪಂನಲ್ಲಿರುವ ಕಾಲೇಜಿನ ಮೇಲೂ ದಾಳಿನಡೆಸಿ ಶೋಧ ನಡೆಸಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಸದಸ್ಯರ ಮನೆ ಮೇಲೂ ದಾಳಿ ಮಾಡಿದ್ದು, ಇಂಚಿಂಚೂ ಮಾಹಿತಿ ಕಲೆ ಹಾಕುತ್ತಿದ್ದಾರೆ.