More

    ರೈಲು ಬೋಗಿಯಲ್ಲಿ ಆಸ್ಪತ್ರೆ ನಿರ್ಮಾಣ- ಸಚಿವ ಸುರೇಶ ಅಂಗಡಿ

    ಬೆಳಗಾವಿ: ದೇಶದಲ್ಲಿ ಕರೊನಾ ಮಹಾಮಾರಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಣೆ ಮಾಡಿದ್ದು ಅದನ್ನು ಗಂಭೀರವಾಗಿ ಪರಿಗಣಿಸಿ ರೈಲು ಬೋಗಿಯಲ್ಲಿ ಆಸ್ಪತ್ರೆಗಳಲ್ಲಿರುವಂತೆ ಐಸೋಲೇಷನ್ ವಾರ್ಡ್ ನಿರ್ಮಾಣ ಮಾಡಲು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸೂಚನೆ ನೀಡಿದ್ದಾರೆ.

    ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನೈಋತ್ತ ರೈಲ್ವೆಯಲ್ಲಿ ಕರೊನಾ ರೋಗಿಗಳಿಗೆ ಮತ್ತು ಕ್ವಾರಂಟೈನ್ ನಲ್ಲಿರುವ ರೈಲ್ವೆ ಬೋಗಿಗಳಲ್ಲಿರುವ ಆಸನಗಳನ್ನು ಸದ್ಬಳಕೆ ಮಾಡಿಕೊಂಡು 312 ಬೆಡ್ ವ್ಯವಸ್ಥೆ ಮಾಡಬೇಕೆಂದು ರೈಲ್ವೆ ಇಲಾಖೆಯ ಪ್ರಧಾನ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದೇನೆ.

    ಮಂಗಳವಾರ ಸಂಜೆಯವರೆಗೆ 15 ಬೆಡ್ ನಿರ್ಮಾಣ ಮಾಡಿದ್ದು ಒಂದೆರಡು ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಆಸ್ಪತ್ರೆಗಳಲ್ಲಿರುವ ವಾರ್ಡ್‌ಗಳಂತೆ ವ್ಯವಸ್ಥೆ ಮಾಡಬೇಕೆಂದು ನಿರ್ದೇಶನ ನೀಡಿದ್ದು, ಗೂಡ್ಸ್ ರೈಲುಗಳಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.
    ಆಸ್ಪತ್ರೆ ವೈದ್ಯರು, ನರ್ಸ್‌ಗಳು, ಪೊಲೀಸ್ ಇಲಾಖೆ, ಮಾಧ್ಯಮದವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.

    ಇನ್ನೂ 15 ದಿನ ಅತ್ಯಂತ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ಬೇರೆ ರಾಜ್ಯದ ಕಾರ್ಮಿಕರು ಯಾರೂ ಸಹ ಗಲಾಟೆ ಮಾಡುವ ಅಗತ್ಯ ಇಲ್ಲ. ಯಾವುದೇ ರಾಜ್ಯದ ಕಾರ್ಮಿಕರಿದ್ದರೂ ಅವರನ್ನು ನೋಡಿಕೊಳ್ಳುವುದು ಆಯಾ ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಗೃಹ ಮಂತ್ರಿಗಳು ನಿರ್ದೇಶನ ನೀಡಿದ್ದಾರೆ ಎಂದು ಸಚಿವ ಅಂಗಡಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts