

ಬೈಂದೂರು: ತಾಲೂಕಿನ ರೈಲ್ವೆ ಸ್ಟೇಷನ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರ ಕರ್ತವ್ಯ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭ ಬೈಕ್ ನಿಯಂತ್ರಣ ತಪ್ಪಿ ಗಟಾರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಕೊಂಕಣ ರೈಲ್ವೆಯಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ಟ್ರಾೃಕ್ಮನ್ ಕಾರ್ಯನಿರ್ವಹಿಸುತ್ತಿರುವ ಬೈಂದೂರು ನಿವಾಸಿ ಸಂಜಯ್ ಕುಮಾರ್ ಮೃತಪಟ್ಟವರು. ಇವರು ರಾತ್ರಿ ಪಾಳಿ ಡ್ಯೂಟಿ ಮುಗಿಸಿ ಬೆಳಗ್ಗೆ 7ರಿಂದ 7.30 ಸುಮಾರಿಗೆ ಭಟ್ಕಳದಿಂದ ಬೈಂದೂರು ಕಡೆಗೆ ಬೈಕ್ನಲ್ಲಿ ತೆರಳುವ ಬೆಳಕೆ ಸೊಸೈಟಿಯ ಹತ್ತಿರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಆಕಸ್ಮಿಕವಾಗಿ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಗಟಾರಕ್ಕೆ ಬಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.