

ಹೊಸದಿಲ್ಲಿ: ಉತ್ತರ ಭಾರತದಲ್ಲಿ ಕಂಡುಬಂದ ಶೀತದ ವಾತಾವರಣ ಹಾಗೂ ಹಲವಾರು ರಾಜ್ಯಗಳಲ್ಲಿ ಆವರಿಸುತ್ತಿರುವ ದಟ್ಟವಾದ ಮಂಜಿನ ಕಾರಣದಿಂದ ಭಾರತೀಯ ರೈಲ್ವೆಯ ಮೊರಾದಾಬಾದ್ ವಿಭಾಗವು ಡಿಸೆಂಬರ್ 2023ರಲ್ಲಿ 20,000 ಕಾಯ್ದಿರಿಸಿದ ಟಿಕೆಟ್‌ಗಳ ರದ್ದತಿಯನ್ನು ದಾಖಲಿಸಿದ್ದು, ರೈಲ್ವೇ ಇಲಾಖೆಗೆ ಭಾರೀ ನಷ್ಟ ಉಂಟಾಗಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ.
ಮೊರಾದಾಬಾದ್ ವಿಭಾಗದ ಡಿವಿಜನಲ್ ರೈಲ್ವೇ ಮ್ಯಾನೇಜರ್ (ಡಿಆರ್‌ಎಂ) ರಾಜ್ ಕುಮಾರ್ ಸಿಂಗ್ ನೀಡಿದ ಮಾಹಿತಿ ಪ್ರಕಾರ, ರಿಸರ್ವೇಶನ್ ಅಡಿಯಲ್ಲಿ ಟಿಕೆಟ್ ಕಾಯ್ದಿರಿಸಿದ್ದ ಪ್ರಯಾಣಿಕರು ರೈಲುಗಳ ವಿಳಂಬದಿಂದ ತಮ್ಮ ಟಿಕೆಟ್‌ಗಳನ್ನು ರದ್ದುಪಡಿಸಿದ ಹಿನ್ನೆಲೆ ಇಲಾಖೆಗೆ ಸುಮಾರು 1.22 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ.
ರದ್ದಾದ ಟಿಕೆಟ್ ವಿವರ ಹೀಗಿದೆ: ಒಟ್ಟು ರದ್ದಾದ ಕಾಯ್ದಿರಿಸಲಾದ ಟಿಕೆಟ್‌ಗಳಲ್ಲಿ 4,230 ಬರೇಲಿಯಲ್ಲಿ ರದ್ದುಗೊಳಿಸಲಾಗಿದ್ದು, 3,239 ಟಿಕೆಟ್‌ಗಳನ್ನು ಮೊರಾದಾಬಾದ್‌ನಲ್ಲಿ ರದ್ದುಗೊಳಿಸಲಾಗಿದೆ. 3917 ಟಿಕೆಟ್‌ಗಳು ಹರಿದ್ವಾರದಲ್ಲಿ ಮತ್ತು 2,448 ಟಿಕೆಟ್‌ಗಳನ್ನು ರದ್ದುಗೊಳಿಸಲಾಗಿದೆ ಮತ್ತು ಇತರವುಗಳಲ್ಲಿ 2,448 ರದ್ದಾಗಿದೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.
ಜನವರಿ 6 ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಪೂರ್ವ ರಾಜಸ್ಥಾನದ ಕೆಲವು ಭಾಗಗಳಲ್ಲಿ ರಾತ್ರಿ ಮತ್ತು ಬೆಳಗ್ಗೆ ವೇಳೆ ದಟ್ಟವಾದ ಮಂಜಿನ ಪರಿಸ್ಥಿತಿಗಳು ಮುಂದುವರೆಯಲಿದೆ ಎಂದು ವರದಿಯಾಗಿದೆ,(ಏಜೆನ್ಸೀಸ್).