ಬೆಂಗಳೂರು: ( Rain Alert ) ಕಳೆದೊಂದು ವಾರದಿಂದ ಬಿಡುವು ನೀಡಿದ್ದ ಮಳೆ ಮತ್ತೆ ಚುರುಕುಗೊಂಡಿದೆ. ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಉಳಿದೆಡೆ ಒಣಹವೆ ಇತ್ತು. ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಚಂಡಮಾರುತ ಪರಿಚಲನೆ ಮುಂದುವರೆಯುತ್ತಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.