More

    ರಾಜ್ಯದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​​; ಹವಾಮಾನ ಇಲಾಖೆಯಿಂದ ಮುನ್ಸೂಚನೆ..!

    ರಾಜ್ಯದಲ್ಲಿ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ.

    ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದ್ದು, ಶುಕ್ರವಾರ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊಅಲರ್ಟ್‌ ನೀಡಿದೆ.

    ಜ. 5 ರಂದು ಹವಾಮಾನ ಇಲಾಖೆ ಯೆಲ್ಲೊಅಲರ್ಟ್‌ ನೀಡಿದೆ. ಉಳಿದಂತೆ ಜ.6 ರಿಂದ 9 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಜ 5 ರಿಂದ 8ರವರೆಗೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿಯ ಬಹುತೇಕ ಕಡೆ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಕಳೆದ 24ಗಂಟೆಯ ಅವಧಿಯಲ್ಲಿ ಮಳೆಯಾಗಿದ್ದು, ಚಳಿಯ ವಾತಾವರಣ ಮತ್ತು ಶೀತಗಾಳಿ ಇದೆ. ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಯಲ್ಲಾಪುರ, ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿ, ಬಾಳೆಹೊನ್ನೂರು, ಜಯಪುರ, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿತಲಾ 2 ಸೆಂ.ಮೀ. ಮಳೆಯಾಗಿದೆ.

    ಉಡುಪಿ ಜಿಲ್ಲೆಯ ಕೋಟದಲ್ಲಿ 4 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಮಂಕಿ ಹಾಗೂ ಮಂಗಳೂರಿನಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

    ವಾಯುಭಾರ ಕುಸಿತದಿಂದ ಬುಧವಾರ ರಾತ್ರಿಯಿಂದ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತ ವಾಗಿದೆ. ಕೆಲವೆಡೆ ಧಾರಾಕಾರವಾಗಿ ಮಳೆಯಾಗುತ್ತಿದ್ದರೆ ಬಹುತೇಕ ಕಡೆ ನಿರಂತರ ಜಿಟಿಜಿಟಿ ಮಳೆಯಾಗುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts