More

    ರಾಜ್ಯದಲ್ಲಿ 4 ದಿನ ಮಳೆ ಮುಂದುವರಿಕೆ:ಹಲವೆಡೆ ಉಷ್ಣಾಂಶ ಕುಸಿತ

    ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಂಗಳವಾರ ವರುಣಾರ್ಭಟ ಜೋರಾಗಿತ್ತು.ಉತ್ತರ ಕನ್ನಡದ ಸಿದ್ದಾಪುರದಲ್ಲಿ 52 ಮಿಮೀ, ಶೃಂಗೇರಿಯಲ್ಲಿ 50 ಮಿಮೀ ಮಳೆ ಸುರಿದಿದೆ.ಕೆಲವೆಡೆ ಸಾಧಾರಣ ಪ್ರಮಾಣದಲ್ಲಿ ಗುಡುಗು ಮಿಂಚು ಸಹಿತ ವರ್ಷಧಾರೆಯಾಗಿದೆ ಎಂದು ವರುಣಾ ಮಿತ್ರ ಮಾಹಿತಿ ಕೊಟ್ಟಿದೆ.

    ಕೊಡಗು, ಮಂಡ್ಯ, ಮೈಸೂರಿನಲ್ಲಿ ಮುಂದಿನ ಎರಡು ದಿನ ಹಾಗೂ ಶಿವಮೊಗ್ಗ, ಹಾಸನ, ಚಾಮರಾಜನಗರದಲ್ಲಿ ಮೇ 15ರಂದು, ದಣ ಕನ್ನಡ, ಉಡುಪಿಯಲ್ಲಿ ಮೇ 17ರಿಂದ ಮುಂದಿನ ಮೂರು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯಿಂದ ಯೆಲ್ಲೋ ಅರ್ಲಟ್​ ಘೋಷಿಸಿದೆ. ಉತ್ತರ ಕನ್ನಡದಲ್ಲಿ ಮೇ 18, ಮೇ 19ರಂದು ಯೆಲ್ಲೋ ಅರ್ಲಟ್​ ಇರಲಿದೆ. ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.

    ಬಿಸಿಲ ಪ್ರಕರತೆ! ಆನಾರೋಗ್ಯಕ್ಕೆ ಒಳಗಾಗುತ್ತಿರುವ ಮಕ್ಕಳು

    10 ಡಿ.ಸೆ.ಉಷ್ಣಾಂಶ ಕುಸಿತ
    ಮಾರ್ಚ್​ನಿಂದ ಮೇ ಮೊದಲ ವಾರದವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಉಷ್ಣಾಂಶ ದಾಖಲಾಗುತ್ತಿತ್ತು. 31 ಜಿಲ್ಲೆಗಳ ಪೈಕಿ 28 ಜಿಲ್ಲೆಗಳಲ್ಲಿ ಉಷ್ಣಾಂಶ 40ರ ಗಡಿ ದಾಟಿತ್ತು. ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ 45ರ ಅಸುಪಾಸಿನಲ್ಲಿ ಉಷ್ಣಾಂಶ ಕಂಡುಬಂದಿತ್ತು. ಇದರ ಪರಿಣಾಮ ಬಿಸಿಗಾಳಿ ಬೀಸಿತ್ತು. ಇದೀಗ ಸತತ ಮಳೆ ಬೀಳುತ್ತಿರುವ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 8-10 ಡಿ.ಸೆ.ಉಷ್ಣಾಂಶ ಕುಸಿತವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ 35-36 ರ ಅಸುಪಾಸಿನಲ್ಲಿ ಉಷ್ಣಾಂಶ ದಾಖಲಾಗುತ್ತಿದ್ದು, ತಂಪಾದ ವಾತಾವರಣ ಅನುಭವವಾಗುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts