More

    ರಾಜ್ಯದಲ್ಲಿ ಮಳೆ ಮುಂದುವರಿಕೆ; ನಾಳೆ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್

    ಬೆಂಗಳೂರು: ರಾಜ್ಯದಲ್ಲಿ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ.
    ಕಳೆದ 24 ಗಂಟೆಗಳಲ್ಲಿ ಕೊಡಗು, ಗದಗ, ಹಾವೇರಿ ಮತ್ತು ದಾವಣಗೆರೆಯಲ್ಲಿ ಸರಾಸರಿ 23ರಿಂದ 36 ಮಿ.ಮೀ. ವರೆಗೆ ಮಳೆಯಾಗಿದೆ. ಚಿಕ್ಕಮಗಳೂರು, ದಕ್ಷಿಣಕನ್ನಡ, ಶಿವಮೊಗ್ಗ, ಧಾರವಾಡ ಮತ್ತು ಬಾಗಲಕೋಟೆಯಲ್ಲಿ ಸರಾಸರಿ 10ರಿಂದ 13 ಮಿ.ಮೀ. ಮಳೆಯಾಗಿದೆ. ಕರಾವಳಿಯ ದಕ್ಷಿಣಕನ್ನಡ ಹಾಗೂ ಉಡುಪಿಯಲ್ಲಿ ಜ.10ರಂದು ಭಾರಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

    ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ರಾಮನಗರ ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಬೀಳಲಿದೆ. ಜ.11ರ ನಂತರ ಮಳೆ ಕ್ಷೀಣಿಸಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಮಾಹಿತಿ ನೀಡಿದರು.

    ಇದನ್ನೂ ಓದಿ: ಸೆಕ್ಸ್​ ಮಾಡುವಾಗ ಉಸಿರುಗಟ್ಟಿ ಸತ್ತೇ ಹೋದಳು… ಬ್ಯಾಚಲರ್​ ಮನೆಯಲ್ಲಿ ವಿವಾಹಿತೆ ಸಾವು!

    ಅಕಾಲಿಕ ಮಳೆ, ಬೆಳೆ ಹಾಳು: ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಸದ್ಯಕ್ಕೆ ಉಪಯೋಗವಿಲ್ಲ. ಏಕೆಂದರೆ ಇದು ಕೊಯ್ಲಿಗೆ ಬಂದಿರುವ ಭತ್ತ, ಕಾಫಿ ಮತ್ತು ರಾಗಿ ಸೇರಿ ಇನ್ನಿತರ ಬೆಳೆಗಳು ಕಟಾವು ಮಾಡುವ ಸಮಯ. ಆದರೆ, ಈಗ ಸುರಿಯುತ್ತಿರುವ ಮಳೆಯಿಂದ ಕಟಾವಿಗೆ ಬಂದಿರುವ ಬೆಳೆಗಳು ಸಂಪೂರ್ಣ ಹಾಳಾಗಿವೆ. ದುಬಾರಿ ರಸಗೊಬ್ಬರ, ಕ್ರಿಮಿನಾಶಕ ಸಿಂಪಡಣೆ ಹಾಗೂ ಕೂಲಿ ಕಾರ್ಮಿಕರನ್ನು ಬಳಸಿಕೊಂಡು ನಾಟಿ ಮಾಡಿಸಿ, ರೈತರು ಉತ್ತಮ ಬೆಳೆಗಳನ್ನು ಬೆಳೆದಿದ್ದರು. ಇನ್ನೇನು ಬೆಳೆ ಕೈ ಸೇರುತ್ತದೆ ಅಂದುಕೊಳ್ಳುವಷ್ಟರಲ್ಲೇ ಅಕಾಲಿಕ ಮಳೆ ರೈತರ ಆಸೆಗೆ ತಣ್ಣೀರೆರಚಿದೆ.

    ಕರೊನಾ ಲಸಿಕೆ ಪಡೆದ ಹತ್ತೇ ದಿನಗಳಲ್ಲಿ ಸತ್ತ!; ಸಾವಿಗೆ ಕಾರಣ ವಿಷ ಎಂದಿತ್ತು ಮರಣೋತ್ತರ ಪರೀಕ್ಷೆಯಲ್ಲಿ…

    ಖುರ್ಚಿಯಲ್ಲಿ ಪ್ರಿಯತಮನನ್ನು ಕಟ್ಟಿ ಸೆಕ್ಸ್​ ಮಾಡಲು ಹೋದ ಮಹಿಳೆ; ಕಾಮದಾಸೆಯಲ್ಲೇ ಯಮಲೋಕ ಸೇರಿದ ಯುವಕ

    ಗ್ಯಾಂಗ್​ ರೇಪ್​ ಮಾಡಿ ಗುಪ್ತಾಂಗಕ್ಕೆ ಗ್ಲಾಸಿನ ಚೂರು ತುಂಬಿದ ಪಾಪಿಗಳು! ಸಾವು ಬದುಕಿನ ನಡುವೆ ಮಹಿಳೆಯ ಹೋರಾಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts