ಬೆಂಗಳೂರಿನಲ್ಲಿ ಮುಂದುವರೆದ ಜಿಟಿ ಜಿಟಿ ಮಳೆ

ಬೆಂಗಳೂರು: ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಅಪ್ಪಳಿಸಿದ ವಾರ್ಧಾ ಚಂಡಮಾರುತದ ಪರಿಣಾಮವಾಗಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಆರಂಭವಾದ ಮಳೆ ಮಂಗಳವಾರವೂ ಮುಂದುವರಿದಿದೆ. ನಗರದ ಜನರನ್ನು ಚಳಿ ಗಡ ಗಡ ನಡುಗಿಸಿತು.

ಬೆಂಗಳೂರಿನಲ್ಲಿ ನಾಳೆಯವರೆಗೂ ಜಿಟಿ ಜಿಟಿ ಮಳೆ ಮುಂದುವರೆಯುವ ಸಾಧ್ಯತೆಗಳಿದ್ದು, ರಾಜ್ಯದ ಇತರೆಡೆಗಳಲ್ಲೂ ಮುಖ್ಯವಾಗಿ ದಕ್ಷಿಣ ಒಳನಾಡಿನಲ್ಲಿ ಇನ್ನೂ ಎರಡು ದಿನ ಮಳೆ ಬರುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ಸೋಮವಾರ ರಾತ್ರಿ ಸುರಿದ ಗಾಳಿ, ಮಳೆಗೆ ಬೆಂಗಳೂರಿನ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಮರಗಳೂ ಮುರಿದು ಬಿದ್ದ ವರದಿಗಳು ಬಂದಿವೆ.

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *